×
Ad

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಐದನೇ ಆರೋಪಿಯ ಬಂಧನ

Update: 2023-07-22 13:21 IST

ಇಂಫಾಲ, ಜು.22: ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲುಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಐದನೇ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ.

ಗುರುವಾರ ಬಂಧಿಸಲಾಗಿದ್ದ ಇತರ ನಾಲ್ವರು ಆರೋಪಿಗಳನ್ನು ಶುಕ್ರವಾರ 11 ದಿನಗಳ ಪೊಲೀಸ್ ಕಸ್ಡಡಿಗೆ ಒಪ್ಪಿಸಲಾಗಿದೆ. 19 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 4ರಂದು ಕಾಂಗ್ ಪೋಕ್ಪಿ ಜಿಲ್ಲೆಯಲ್ಲಿ ನಡದಿದ್ದ ಹಿಂಸಾಚಾರದ ವೇಳೆ ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿದ್ದ ವೀಡಿಯೊ ಜು.19ರಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಇದರಿಂದ ಈಶಾನ್ಯ ರಾಜ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿತ್ತು.

ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕೃತ್ಯಕ್ಕೆ ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಕುಕಿ-ಜೋ ಬುಡಕಟ್ಟು ಮಹಿಳೆಯರನ್ನು ಬೆತ್ತಲುಗೊಳಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಇಬ್ಬರು ಆರೋಪಿಗಳ ಮನೆಗೆ ಅವರದ್ದೇ ಗ್ರಾಮದ ಮಹಿಳೆಯರು ಬೆಂಕಿ ಹಚ್ಚಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News