×
Ad

ವಯನಾಡಿನಲ್ಲಿ ಭಾರೀ ಭೂಕುಸಿತ: ಹಲವರು ಮಣ್ಣಿನಡಿಯಲ್ಲಿ ಸಿಕ್ಕಿ ಹಾಕಿಕೊಂಡಿರುವ ಶಂಕೆ

Update: 2024-07-30 07:37 IST

Photo: facebook.com/digitalmalayalionline

ವಯನಾಡ್: ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಮಂಗಳವಾರ ಮುಂಜಾನೆ ಭಾರೀ ಭೂಕುಸಿತ ಸಂಭವಿಸಿದ್ದು,  ನೂರಾರು ಮಂದಿ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ತೊಂದರೆಗೀಡಾಗಿರುವ ಪ್ರದೇಶಗಳಿಗೆ ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಕೋಪ ಪರಿಹಾರ ಸ್ಪಂದನೆ ಪಡೆ (ಎನ್ ಡಿಆರ್ ಎಫ್) ತಂಡಗಳನ್ನು ನಿಯೋಜಿಸಲಾಗಿದ್ದು, ಹೆಚ್ಚುವರಿ ಎನ್ ಡಿಆರ್ ಎಫ್ ತಂಡವನ್ನೂ ಕಳುಹಿಸಿಕೊಡಲಾಗುತ್ತಿದೆ ಎಂದು ಕೇರಳ ರಾಜ್ಯ ವಿಕೋಪ ನಿರ್ವಹಣೆ ಪ್ರಾಧಿಕಾರ ಹೇಳಿದೆ.

ಪರಿಹಾರ ಕಾರ್ಯಾಚರಣೆಗೆ ನೆರವಾಗುವಂತೆ ಕಣ್ಣೂರು ಡಿಫೆನ್ಸ್ ಸೆಕ್ಯುರಿಟಿ ಕಾಪ್ಸ್ ನ ಎರಡು ತಂಡಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಸ್ಥಳೀಯರ ವರದಿಗಳ ಪ್ರಕಾರ ಹಲವು ಮಂದಿ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇದೆ. ಭಾರೀ ಮಳೆಯಾಗುತ್ತಿರುವುದು ಪರಿಹಾರ ಕಾರ್ಯಾಚರಣೆಗೆ ಅಡ್ಡಿಯಾಗಿದೆ ಎಂದು ಕೆಎಸ್ ಡಿಎಂಎ ಫೇಸ್ ಬುಕ್ ನಲ್ಲಿ ವಿವರಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News