×
Ad

ಮಧ್ಯ ಪ್ರದೇಶ ನೂತನ ಸಿಎಂ ಆಗಿ ಮೋಹನ್ ಯಾದವ್ ಆಯ್ಕೆ

Update: 2023-12-11 16:51 IST

Photo: ANI

ಹೊಸದಿಲ್ಲಿ: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ಪಕ್ಷದ ನಾಯಕತ್ವವು ಉಜ್ಜಯನಿ ದಕ್ಷಿಣ ಕ್ಷೇತ್ರದ ಶಾಸಕ ಮೋಹನ್‌ ಯಾದವ್‌ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದೆ. ಹಿಂದಿನ ಶಿವರಾಜ್‌ ಸಿಂಗ್‌ ಚೌಹಾಣ್‌ ನೇತೃತ್ವದ ಸರ್ಕಾರದಲ್ಲಿ ಯಾದವ್‌ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದರು.

ಐವತ್ತೆಂಟು ವರ್ಷದ ಯಾದವ್‌ ಅವರು ಉಜ್ಜಯಿನಿಯಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಜಗದೀಶ್‌ ದಿಯೋರ ಮತ್ತು ರಾಜೇಶ್‌ ಶುಕ್ಲಾ ಅವರನ್ನು ಉಪಮುಖ್ಯಮಂತ್ರಿಗಳನ್ನಾಗಿ ಆಯ್ಕೆಮಾಡಲಾಗಿದೆ.

ಚುನಾವಣೆ ಸ್ಪರ್ಧಿಸಿದ್ದ ಸಂಸದರಲ್ಲಿ ಒಬ್ಬರಾಗಿದ್ದ ಮಾಜಿ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅವರನ್ನು ಸ್ಪೀಕರ್‌ ಸ್ಥಾನಕ್ಕೆ ಆಯ್ಕೆಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News