×
Ad

ಮಗನ ಕಾಲೇಜು ಶುಲ್ಕ ಪಾವತಿಗೆ ಹಣ ಹೊಂದಿಸಲು ಬಸ್ ನಡಿಗೆ ಬಿದ್ದು ತಾಯಿ ಆತ್ಮಹತ್ಯೆ

Update: 2023-07-18 11:36 IST

ಚೆನ್ನೈ: ತಮಿಳುನಾಡಿನಲ್ಲಿ ನಡೆದ ಹೃದಯ ವಿದ್ರಾವಕ ಘಟನೆಯೊಂದರಲ್ಲಿ ಮಗನ ಶಿಕ್ಷಣಕ್ಕಾಗಿ ಹಣ ಹೊಂದಿಸಲು ತಾಯಿಯೊಬ್ಬರು ಬಸ್ಸಿನಡಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವರದಿಗಳ ಪ್ರಕಾರ, ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ 'ಸಫಾಯಿ ಕರ್ಮಚಾರಿ' (ಸ್ವಚ್ಛತಾ ಸಿಬ್ಬಂದಿ) ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಉದ್ದೇಶಪೂರ್ವಕವಾಗಿ ಬಸ್ ನ ಮುಂದೆ ಜಿಗಿದಿರುವುದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಕಂಡುಬಂದಿದೆ.

ಅಪಘಾತದಲ್ಲಿ ಮೃತಪಟ್ಟರೆ ನಿಮ್ಮ ಕುಟುಂಬಕ್ಕೆ 45,000 ರೂ.ಲಭಿಸುವುದಾಗಿ ಹೇಳಿ ಯಾರೋ ದಾರಿ ತಪ್ಪಿಸಿದ್ದರಿಂದ ಮಹಿಳೆ ಈ ರೀತಿ ಮಾಡಿದ್ದಾರೆ ಎಂದು ವರದಿಯಾಗಿದೆ. ಮಗನ ಕಾಲೇಜು ಶುಲ್ಕ ಪಾವತಿಸಲು ಹಣದ ಅಗತ್ಯವಿದ್ದ ಮಹಿಳೆ ತನ್ನ ಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಈ ವೀಡಿಯೋ ನೆಟ್ಟಿಗರನ್ನು ಸೆಳೆದಿದೆ. ವೀಡಿಯೊವನ್ನು ಟ್ವೀಟ್ ಮಾಡಿದ ಜನರು ಹಾಗೂ ಟ್ವಿಟರ್ ಬಳಕೆದಾರರು ಘಟನೆಯ ಬಗ್ಗೆ ತಮ್ಮ ದುಃಖ ಮತ್ತು ಕೋಪವನ್ನು ವ್ಯಕ್ತಪಡಿಸಿದ್ದಾರೆ.

ತನ್ನ ಮಗನ ಫೀಸ್ ಕಟ್ಟುವುದಕ್ಕಾಗಿ ತಾಯಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಸನ್ನಿವೇಶವನ್ನು ಹಲವರು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು.

ಉತ್ತಮ ಭವಿಷ್ಯದ ನಿರೀಕ್ಷೆಯಲ್ಲಿ ತಮ್ಮ ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಜೀವನ ಸಾಗಿಸಲು ಪ್ರಯತ್ನಿಸುವವರು ಎದುರಿಸುತ್ತಿರುವ ತೊಂದರೆಗಳನ್ನು ಈ ಘಟನೆ ಎತ್ತಿ ತೋರಿಸುತ್ತದೆ. ನಿಜವಾದ ಅಭಿವೃದ್ಧಿ ಎಂದರೆ ಯಾರೂ ಅಂತಹ ಹೆಜ್ಜೆ ಇಡಲು ಇಡಬಾರದು ಎಂದು ಟ್ವೀಟ್ ಮಾಡಲಾಗಿದೆ.

ಪ್ರಕರಣದ ಕುರಿತು ಪೊಲೀಸ್ ತನಿಖೆ ನಡೆಯುತ್ತಿದ್ದು, ಪೊಲೀಸರು ಎಲ್ಲಾ ಕೋನಗಳಿಂದ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಪೊಲೀಸರ ತನಿಖೆಯಲ್ಲಿ ಈ ಅಂಶ ಬೆಳಕಿಗೆ ಬಂದಿದೆ ಎಂದು ವರದಿಗಳು ತಿಳಿಸಿವೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News