×
Ad

ವಿಧಾನಸಭಾ ಚುನಾವಣೆ : ಸೆ.15ರಿಂದ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ನಿಂದ ʼಜನಾಕ್ರೋಶ ಯಾತ್ರೆʼ

ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಮಧ್ಯಪ್ರದೇಶದಲ್ಲಿ ಸೆ.15ರಿಂದ ಜನಾಕ್ರೋಶ ಯಾತ್ರೆಯನ್ನು ಆಯೋಜಿಸಲಾಗಿದೆ

Update: 2023-09-07 19:08 IST

ಭೋಪಾಲ್ : ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಮಧ್ಯಪ್ರದೇಶದಲ್ಲಿ ಸೆ.15ರಿಂದ ಜನಾಕ್ರೋಶ ಯಾತ್ರೆಯನ್ನು ಆಯೋಜಿಸಲಾಗಿದೆ ಎಂದು ಶಾಸಕ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯಸ್ಥ ಕಾಂತಿಲಾಲ್ ಬುರಿಯಾ ಹೇಳಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಅಧಿಕಾರಾವಧಿಯಲ್ಲಿನ ನಿರುದ್ಯೋಗ, ಭೃಷ್ಟಾಚಾರ, ಆದಿವಾಸಿಗಳು ಹಾಗೂ ದಲಿತರ ಮೇಲಿನ ದೌರ್ಜನ್ಯ ಕುರಿತು ಬೆಳಕು ಚೆಲ್ಲಲು 7 ಪ್ರಮುಖ ಸ್ಥಳಗಳಲ್ಲಿ ಜನಾಕ್ರೋಶ ರ್ಯಾಲಿ ನಡೆಯಲಿದೆ. ಬಿಜೆಪಿ ಈಗಾಗಲೇ ಆಯೋಜಿಸಿರುವ ಜನಾಶಿರ್ವಾದ ಯಾತ್ರೆಯನ್ನು ಸಮರ್ಥವಾಗಿ ಎದುರಿಸಲು ಜನಾಕ್ರೋಶ ಯಾತ್ರೆ ಆಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News