×
Ad

ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಸ್ಥಿತಿ ಗಂಭೀರ ; ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

Update: 2024-04-28 13:12 IST

ಬೆಂಗಳೂರು: ಅನಾರೋಗ್ಯದ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರದ ಮಾಜಿ ಸಚಿವ, ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್‌ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೋಮಾಕ್ಕೆ ಜಾರಿದ್ದಾರೆ ಎನ್ನಲಾಗಿದೆ. ತೀವ್ರ ನಿಗಾ ಘಟಕದಲ್ಲಿ (ಐಸಿಯು) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಅವರು, ಏ.22ರಂದು ಆಸ್ಪತ್ರೆಗೆ ದಾಖಲಾಗಿದ್ದರು. ತಜ್ಞ ವೈದ್ಯರ ತಂಡವು ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದೆ. ವೈದ್ಯಕೀಯ ಆಮ್ಲಜನಕದ ಸಂಪರ್ಕದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯು ಘಟಕದಲ್ಲಿ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News