×
Ad

ಮುಂಬೈ | ನಿಯಂತ್ರಣ ಕಳೆದುಕೊಂಡು ಹಲವು ವಾಹನಗಳಿಗೆ ಢಿಕ್ಕಿ ಹೊಡೆದ ಬಸ್: ಮೃತರ ಸಂಖ್ಯೆ 6ಕ್ಕೆ ಏರಿಕೆ

Update: 2024-12-10 10:26 IST

Photo credit: PTI

ಮುಂಬೈ: ಪಶ್ಚಿಮ ಮುಂಬೈನ ಕುರ್ಲಾದಲ್ಲಿ ಸರಕಾರಿ ಬಸ್ ವೊಂದು ನಿಯಂತ್ರಣ ಕಳೆದುಕೊಂಡು ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಮೃತಪಟ್ಟಿದ್ದು, 49 ಮಂದಿ ಗಾಯಗೊಂಡಿದ್ದಾರೆ.

ಸೋಮವಾರ ರಾತ್ರಿ ಎಸ್ಜಿ ಬಾರ್ವೆ ಮಾರ್ಗದಲ್ಲಿ ಬಸ್ ವೊಂದು ಪಾದಚಾರಿಗಳಿಗೆ ಮತ್ತು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣ ಘಟನೆ ಸಂಭವಿಸಿದೆ ಎಂದು ಮುನ್ಸಿಪಲ್ ಕಾರ್ಪೊರೇಷನ್ ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೃಹನ್ ಮುಂಬೈ ಸಾರಿಗೆ ಸಂಸ್ಥೆಗೆ (BEST) ಸೇರಿದ ಬಸ್ ಕುರ್ಲಾ ನಿಲ್ದಾಣದಿಂದ ಅಂಧೇರಿ ಕಡೆಗೆ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿದೆ. ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಪ್ರಕಾರ, ಬಸ್ 30 ರಿಂದ 40 ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ಬಸ್ ಕುರ್ಲಾದಿಂದ ಅಂಧೇರಿಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, 49ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕೂಡಲೇ ಗಾಯಾಳುಗಳನ್ನು ಹತ್ತಿರದ ಭಾಭಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದಲ್ಲಿ ಹಲವು ವಾಹನಗಳು ಜಖಂಗೊಂಡಿವೆ ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News