×
Ad

ಹೊಸದಿಲ್ಲಿ | ನಾಲ್ಕು ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ : ಮೃತರ ಸಂಖ್ಯೆ 11ಕ್ಕೆ ಏರಿಕೆ

Update: 2025-04-19 19:08 IST

Photo | hindustantimes

ಹೊಸದಿಲ್ಲಿ : ಮುಸ್ತಫಾಬಾದ್‌ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಕಟ್ಟಡ ಕುಸಿತದ ಸ್ಥಳದಲ್ಲಿ ಎನ್‌ಡಿಆರ್‌ಎಫ್‌, ಅಗ್ನಿಶಾಮಕ ದಳ, ದಿಲ್ಲಿ ಪೊಲೀಸರು ಜಂಟಿಯಾಗಿ 12 ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಘಟನೆಯಲ್ಲಿ ಮೃತಪಟ್ಟ 11 ಜನರ ಪೈಕಿ ಎಂಟು ಮಂದಿ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೃತರಲ್ಲಿ ಮೂವರು ಮಹಿಳೆಯರು, ನಾಲ್ವರು ಮಕ್ಕಳು ಕೂಡ ಸೇರಿದ್ದಾರೆ.

ಪೊಲೀಸರ ಪ್ರಕಾರ, ಕಟ್ಟಡದಲ್ಲಿ 22 ಜನರು ವಾಸುತ್ತಿದ್ದರು. ಅವರಲ್ಲಿ 11 ಮಂದಿ ಮೃತಪಟ್ಟಿದ್ದಾರೆ. ಇನ್ನುಳಿದ  11 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಆರು ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಐವರು ಇನ್ನೂ ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News