ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣಗೆ ಜಯ
ಬೆಳಗಾವಿಯಲ್ಲಿ ಕಾಂಗ್ರೆಸ್‌ನ ಮೃಣಾಲ್ ಹೆಬ್ಬಾಳ್ಕರ್ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ಗೆಲುವು
ದ.ಕ. ಲೋಕಸಭಾ ಕ್ಷೇತ್ರ | 1 ಲಕ್ಷ ದಾಟಿದ ಕ್ಯಾ.ಬ್ರಿಜೇಶ್ ಚೌಟರ ಮುನ್ನಡೆ
ದ.ಕ. ಲೋಕಸಭಾ ಕ್ಷೇತ್ರ | 1 ಲಕ್ಷ ದಾಟಿದ ಕ್ಯಾ.ಬ್ರಿಜೇಶ್ ಚೌಟರ ಮುನ್ನಡೆ
ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆರಂಭಿಕ ಸುತ್ತಿನಿಂದಲೇ ಮುನ್ನಡೆ ಕಾಯ್ದುಕೊಂಡು ಬಂದಿದ್ದು, 1 ಲಕ್ಷ ಮತಗಳ ಗಡಿಯನ್ನು ದಾಟಿದ್ದಾರೆ. ಕ್ಯಾ.ಬ್ರಿಜೇಶ್ ಚೌಟ 439958 ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಆರ್. ಪದ್ಮರಾಜ್ 103667 ಮತಗಳನ್ನು ಗಳಿಸಿದ್ದಾರೆ. ಆ ಮೂಲಕ ಬ್ರಿಜೇಶ್ ಚೌಟ 103667 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬಳ್ಳಾರಿಯಲ್ಲಿ ಶ್ರೀರಾಮುಲು ವಿರುದ್ಧ ಇ.ತುಕಾರಾಂಗೆ ಗೆಲುವು
ಬಿಎಸ್‌ಪಿ ತೊರೆದು ಬಿಜೆಪಿ ಸೇರಿದ್ದ ರಿತೇಶ್ ಪಾಂಡೆಗೆ ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಕ್ಷೇತ್ರದಲ್ಲಿ 61,181 ಮತಗಳ ಹಿನ್ನಡೆ
ಹರಿಯಾಣದ ಕುರುಕ್ಷೇತ್ರ ಕ್ಷೇತ್ರದಲ್ಲಿ ಎಎಪಿಯ ಸುಶೀಲ್ ಗುಪ್ತಾ ಬಿಜೆಪಿಯ ನವೀನ್ ಜಿಂದಾಲ್ ವಿರುದ್ಧ 1,703 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಕಾಸರಗೋಡು: 26 ಸಾವಿರ ದಾಟಿದ ರಾಜ್ ಮೋಹನ್ ಉಣ್ಣಿತ್ತಾನ್ ಮುನ್ನಡೆ
ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ 26,455 ಮತಗಳ ಮುನ್ನಡೆ ಸಾಧಿಸಿದ್ದಾರೆ. ಉಣ್ಣಿತ್ತಾನ್ 1,39,646 ಮತಗಳನ್ನು ಗಳಿಸಿದ್ದಾರೆ. ಸಿಪಿಎಂ ಅಭ್ಯರ್ಥಿ ಎಂ.ವಿ.ಬಾಲಕೃಷ್ಣನ್ ಮಾಸ್ಟರ್ 1,13,191 ಮತಗಳನ್ನು ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂ.ಎಲ್. 74,697 ಮತಗಳನ್ನು ಗಳಿಸಿ ತೃತೀಯ ಸ್ಥಾನದಲ್ಲಿದ್ದಾರೆ.
ಮಹಾರಾಷ್ಟ್ರದ ಬಾರಾಮತಿ ಕ್ಷೇತ್ರದಲ್ಲಿ ಎನ್‌ಸಿಪಿಯ (ಶರದ್ ಪವಾರ್ ಬಣ) ಸುಪ್ರಿಯಾ ಸುಳೆ 9263 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಮಹಾರಾಷ್ಟ್ರದ ಮುಂಬೈ (ಉತ್ತರ) ಕ್ಷೇತ್ರದಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ 100764 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಮಹಾರಾಷ್ಟ್ರ: ಮಹಾರಾಷ್ಟ್ರದ ನಾಗ್ಪುರ ಕ್ಷೇತ್ರದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು 28987 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.