ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮುನ್ನಡೆ.
12ನೇ ಸುತ್ತಿನ ಮತ ಎಣಿಕೆ ಮುಕ್ತಾಯ.
ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆ 101381 ಮತಗಳ ಮುನ್ನಡೆ.
ಸರ್ಕಾರ ರಚನೆಗೆ ಕಸರತ್ತು ಆರಂಭಿಸಿದ INDIA ಒಕ್ಕೂಟ
ಅಯೋಧ್ಯೆ(ಫೈಝಾಬಾದ್) ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷಕ್ಕೆ ಮುನ್ನಡೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಕೋಟ ಶ್ರೀನಿವಾಸ ಪೂಜಾರಿಯ ಮುನ್ನಡೆ ಅಂತರ 143763 ಮತಗಳಿಗೆ ಏರಿಕೆ
ಕೋಟ ಶ್ರೀನಿವಾಸ ಪೂಜಾರಿ 403680 ಮತ
ಕಾಂಗ್ರೆಸ್ ಜಯಪ್ರಕಾಶ್ ಹೆಗ್ಡೆ 259917 ಮತ
6096 ನೋಟಾ ಚಲಾವಣೆಯಾಗಿದೆ.
ಗುಜರಾತ್ ನ ಗಾಂಧೀನಗರ ಕ್ಷೇತ್ರದಲ್ಲಿ ಬಿಜಪಿಯ ಅಮಿತ್ ಶಾ ಗೆ ಭಾರೀ ಗೆಲುವು
ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಗೆಲುವು : ಘೋಷಣೆ ಮಾತ್ರ ಬಾಕಿ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ: ಒಂದು ಲಕ್ಷ ದಾಟಿದ ಶೋಭಾ ಕರಂದ್ಲಾಜೆ ಮುನ್ನಡೆ
ಶೋಭಾ ಕರಂದ್ಲಾಜೆ 372422 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜೀವ್ ಗೌಡ - 265915 ಮತಗಳನ್ನು ಗಳಿಸಿದ್ದಾರೆ. ಶೋಭಾ ಕರಂದ್ಲಾಜೆ 106507 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಜೆಡಿಯುನ ನಿತೀಶ್ ಕುಮಾರ್ ಜೊತೆ ಮಾತುಕತೆ ನಡೆಸಲು ಮುಂದಾದ ಕಾಂಗ್ರೆಸ್ : ಮೂಲಗಳು
ದ.ಕ. ಲೋಕಸಭಾ ಕ್ಷೇತ್ರ | ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮುನ್ನಡೆ 84685 ಮತಗಳಿಗೆ ಏರಿಕೆ
ಬ್ರಿಜೇಶ್ ಚೌಟ - 344035 ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಆರ್. ಪದ್ಮರಾಜ್ - 259350 ಮತಗಳನ್ನು ಗಳಿಸಿದ್ದಾರೆ.
ಚಾಮರಾಜನಗರ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಗೆ ಭಾರೀ ಮುನ್ನಡೆ
ಈ ಕ್ಷೇತ್ರದಲ್ಲಿ 11 ಸುತ್ತುಗಳ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ 114181 ಮತಗಳಿಂದ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಸುನೀಲ್ 488057 ಮತಗಳನ್ನು ಗಳಿಸಿದ್ದರೆ, ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ 373876 ಮತಗಳನ್ನು ಗಳಿಸಿದ್ದಾರೆ.