ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ಬೀದರ್ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ನ ಸಾಗರ್ ಖಂಡ್ರೆಗೆ 73,691 ಮತಗಳ ಭಾರೀ ಅಂತರಗಳ ಮುನ್ನಡೆ
ಪ್ರಜ್ವಲ್ ರೇವಣ್ಣಗೆ ಭಾರೀ ಹಿನ್ನಡೆ
ತ್ರಿಶೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಗೆಲುವು ಬಹುತೇಕ ಖಚಿತ
ಕಾಸರಗೋಡು: ರಾಜ್ ಮೋಹನ್ ಉಣ್ಣಿತ್ತಾನ್ ರಿಗೆ 15,441 ಮತಗಳ ಮುನ್ನಡೆ
ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ 93,682 ಮತಗಳನ್ನು ಗಳಿಸಿದ್ದಾರೆ. ಸಿಪಿಎಂ ಅಭ್ಯರ್ಥಿ ಎಂ.ವಿ.ಬಾಲಕೃಷ್ಣನ್ ಮಾಸ್ಟರ್ 78,241 ಮತಗಳನ್ನು ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂ.ಎಲ್. 45,044 ಮತಗಳನ್ನು ಗಳಿಸಿ ತೃತೀಯ ಸ್ಥಾನದಲ್ಲಿದ್ದಾರೆ.
ಕಲುಬುರಗಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರು ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ವಿರುದ್ಧ 16,248 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರ | ಉಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಗೆ ಹಿನ್ನಡೆ
ಗಾಂಧಿನಗರ ಕ್ಷೇತ್ರದಲ್ಲಿ ಅಮಿತ್ ಶಾ 2.31 ಲಕ್ಷ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ
ದ.ಕ. ಲೋಕಸಭಾ ಕ್ಷೇತ್ರ | ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರಿಗೆ 68396 ಮತಗಳ ಮುನ್ನಡೆ
ಬ್ರಿಜೇಶ್ ಚೌಟ - 296706 ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಆರ್. ಪದ್ಮರಾಜ್ - 228310 ಮತಗಳನ್ನು ಗಳಿಸಿದ್ದಾರೆ.
9614 ನೋಟಾ ಚಲಾವಣೆಯಾಗಿದೆ.
ಬೆಂಗಳೂರು ಸೆಂಟ್ರಲ್ ನಲ್ಲಿ ಕಾಂಗ್ರೆಸ್ ನ ಮನ್ಸೂರ್ ಅಲಿ ಖಾನ್ 40 ಸಾವಿರ ಮತಗಳ ಮುನ್ನಡೆ