×
Ad

ತಿರುವನಂತಪುರ ಪಾಲಿಕೆ ಚುನಾವಣೆಯಲ್ಲಿ ಎನ್‌ಡಿಎಗೆ ಐತಿಹಾಸಿಕ ಜಯ; ಮೋದಿ ಸಂತಸ

ತಿರುವನಂತಪುರಕ್ಕೆ ಧನ್ಯವಾದಗಳು ಎಂದ ಪ್ರಧಾನಿ

Update: 2025-12-13 17:57 IST

CREDIT: timesofindia

ತಿರುವನಂತಪುರ: ತಿರುವನಂತಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಐತಿಹಾಸಿಕ ಬಹುಮತ ಸಾಧಿಸಿದೆ. ಈ ಫಲಿತಾಂಶವನ್ನು ಕೇರಳದ ರಾಜಕೀಯದಲ್ಲಿ ಮಹತ್ವದ ತಿರುವು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ‘ತಿರುವನಂತಪುರಕ್ಕೆ ಧನ್ಯವಾದಗಳು. ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ದೊರೆತ ಬಹುಮತವು ಕೇರಳ ರಾಜಕೀಯದಲ್ಲಿ ಮಹತ್ವದ ಕ್ಷಣವಾಗಿದೆ. ರಾಜ್ಯದ ಅಭಿವೃದ್ಧಿಯ ಆಕಾಂಕ್ಷೆಗಳನ್ನು ನಮ್ಮ ಪಕ್ಷದಿಂದ ಮಾತ್ರ ಸಾಕಾರಗೊಳಿಸಬಹುದು ಎಂಬ ವಿಶ್ವಾಸವನ್ನು ಜನತೆ ವ್ಯಕ್ತಪಡಿಸಿದ್ದಾರೆ’ ಎಂದು ತಿಳಿಸಿದ್ದಾರೆ.

ತಿರುವನಂತಪುರದ ಸಮಗ್ರ ಅಭಿವೃದ್ಧಿಗೆ ಎನ್‌ಡಿಎ ಬದ್ಧವಾಗಿದ್ದು, ಮೂಲಸೌಕರ್ಯ ಅಭಿವೃದ್ಧಿ, ನಗರ ಸೇವೆಗಳ ಸುಧಾರಣೆ ಹಾಗೂ ಜನರ ಜೀವನವನ್ನು ಸುಲಭಗೊಳಿಸುವ ದಿಕ್ಕಿನಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದು ಮೋದಿ ಹೇಳಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News