×
Ad

ನೀತಿ ಸಂಹಿತೆ ಉಲ್ಲಂಘನೆ : ತೆಲಂಗಾಣ ಡಿಜಿಪಿ ಅಮಾನತು

Update: 2023-12-03 17:55 IST

Photo: PTI 

ಹೈದರಾಬಾದ್ : ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ ತೆಲಂಗಾಣ ಪೊಲೀಸ್ ಮಹಾನಿರ್ದೇಶಕ ಅಂಜನಿ ಕುಮಾರ್ ಅವರನ್ನು ಅಮಾನತುಗೊಳಿಸಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. 

ತೆಲಂಗಾಣದ ರಾಜ್ಯ ಪೊಲೀಸ್ ನೋಡಲ್ ಅಧಿಕಾರಿ ಸಂಜಯ್ ಜೈನ್, ಮಹೇಶ್ ಭಾಗವತ್ ಅವರೊಂದಿಗೆ ತೆಲಂಗಾಣ ಪೊಲೀಸ್ ಮಹಾನಿರ್ದೇಶಕರು ತೆಲಂಗಾಣ ವಿಧಾನಸಭೆಗೆ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿ ಹಾಗೂ ಸಂಭವನೀಯ ಸಿಎಂ ಅಭ್ಯರ್ಥಿ ಅನುಮುಲಾ ರೇವಂತ್ ರೆಡ್ಡಿ ಅವರನ್ನು ಹೈದರಾಬಾದ್ನಲ್ಲಿ ಹೂವಿನೊಂದಿಗೆ ಭೇಟಿಯಾಗಿರುವುದಕ್ಕೆ ಈ ಕ್ರಮ ಕೈಗೊಳ್ಳಗಾಗಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News