×
Ad

ಅಮೀರ್ ಶೇಖ್ ನವಾಫ್ ನಿಧನಕ್ಕೆ ಸಂತಾಪ ಸೂಚಿಸಲು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಕುವೈಟ್‌ಗೆ ಪ್ರಯಾಣ

Update: 2023-12-17 14:47 IST

ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ (PTI)

ಹೊಸದಿಲ್ಲಿ: ಕುವೈತ್‌ ನ ಅಮೀರ್ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಜಾಬಿರ್ ಅಲ್-ಸಬಾಹ್ ಅವರ ನಿಧನಕ್ಕೆ ಸಂತಾಪ ಸೂಚಿಸಲು ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ಪ್ರತಿನಿಧಿಯಾಗಿ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ರವಿವಾರ ಕುವೈತ್‌ಗೆ ಪ್ರಯಾಣಿಸುತ್ತಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಕುವೈತ್‌ನ ನೂತನ ಅಮೀರ್ ಶೇಖ್ ಮಶಾಲ್ ಅಲ್-ಅಹ್ಮದ್ ಅಲ್-ಜಾಬಿರ್ ಅಲ್-ಸಬಾಹ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ಮೋದಿಯವರ ವೈಯಕ್ತಿಕ ಸಂತಾಪ ಪತ್ರಗಳನ್ನು ಪುರಿ ತಲುಪಿಸಲಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಅಮೀರ್ ಶೇಖ್ ನವಾಫ್ ಅಲ್-ಅಹ್ಮದ್ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದು, ಅಗಲಿದ ಗಣ್ಯ ನಾಯಕರ ಗೌರವಾರ್ಥವಾಗಿ ಡಿ.17(ರವಿವಾರ)ರಂದು ದೇಶಾದ್ಯಂತ ಒಂದು ದಿನದ ಶೋಕಾಚರಣೆ ಆಚರಿಸಲು ಭಾರತ ಸರಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಡಿ.17ರಂದು ಶೋಕಾಚರಣೆ ನಡೆಸಲಾಗುವುದು ಸರಕಾರ ಅಧಿಸೂಚನೆ ಹೊರಡಿಸಿದೆ.

"ಕುವೈತ್ ಅಮೀರ್ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಜಾಬಿರ್ ಅಲ್-ಸಬಾಹ್ ಅವರ ನಿಧನಕ್ಕೆ ಭಾರತ ಸರ್ಕಾರ ಮತ್ತು ಜನರು ತಮ್ಮ ಸಂತಾಪವನ್ನು ವ್ಯಕ್ತಪಡಿಸುತ್ತಾರೆ" ಎಂದು ವಿದೇಶಾಂಗ ಸಚಿವಾಲಯ ಪ್ರಕಟಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News