ಜಂತರ್ ಮಂತರ್‌ನಲ್ಲಿ ಕರ್ನಾಟಕ ರಾಜ್ಯ ಸರಕಾರ ದಿಂದ ಪ್ರತಿಭಟನೆ
Update: 2024-02-07 11:25 IST
Photo: PTI
ಹೊಸ ದಿಲ್ಲಿ : ತೆರಿಗೆ ಪಾಲಿನಲ್ಲಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಆರೋಪಿಸಿ ದಿಲ್ಲಿಯ ಜಂತರ್ ಮಂತರ್‌ನಲ್ಲಿ ರಾಜ್ಯ ಸರಕಾರದಿಂದ ಆಯೋಜಿಸಿರುವ ಪ್ರತಿಭಟನೆಯಲ್ಲಿ, ಕಾಂಗ್ರೆಸ್ ಶಾಸಕರು, ಸಂಸದರು ಭಾಗವಹಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಯಲ್ಲಿ ಸಚಿವರು ಭಾಗಿಯಾಗಿದ್ದಾರೆ.
ಪಕ್ಷಾತೀತವಾಗಿ ಪ್ರತಿಭಟನೆ ಆಯೋಜಿಸುವ ಉದ್ದೇಶದಿಂದ ಬಿಜೆಪಿ - ಜೆಡಿಎಸ್ ಸಂಸದರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ ನೀಡಿದ್ದರೂ ಅವರು ಯಾರೂ ಭಾಗಿಯಾಗಿಲ್ಲ. ನಮ್ಮ ತೆರಿಗೆ ನಮ್ಮ ಹಕ್ಕು ಎಂಬ ಫಲಕಗಳನ್ನು ಶಾಸಕರು ಸಂಸದರು ಪ್ರದರ್ಶಿಸುವ ಮೂಲಕ ಗಮನ ಸೆಳೆದರು.