×
Ad

ಮುಂಬೈನ ತಾಜ್ ಹೋಟೆಲ್, ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

Update: 2024-05-27 20:35 IST

ಮುಂಬೈನ ತಾಜ್ ಹೋಟೆಲ್ | PC : PTI 

ಮುಂಬೈ: ಇಲ್ಲಿನ ಪ್ರಸಿದ್ಧ ತಾಜ್ ಹೋಟೆಲ್ ಹಾಗೂ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಮುಂಬೈ ಪೊಲೀಸ್‌ ಕಂಟ್ರೋಲ್‌ ರೂಂಗೆ ಬೆದರಿಕೆ ಕರೆ ಬಂದಿರುವ ಘಟನೆ ಸೋಮವಾರ ಸಂಜೆ ವರದಿಯಾಗಿದೆ.

ಹೋಟೆಲ್ ಹಾಗೂ ವಿಮಾನ ನಿಲ್ದಾಣದಲ್ಲಿ ಬಾಂಬ್ಗಳನ್ನು ಇರಿಸಲಾಗಿದ್ದು, ಅವುಗಳನ್ನು ಸ್ಫೋಟಿಸುವುದಾಗಿ ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಬಂದಿದೆ ಎಂದು ತಿಳಿದು ಬಂದಿದೆ.

ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ತಾಜ್ ಹೋಟೆಲ್ ಹಾಗೂ ವಿಮಾನ ನಿಲ್ದಾಣದಲ್ಲಿ ಶೋಧ ನಡೆಸಿದ್ದು, ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ ಎನ್ನಲಾಗಿದೆ. ಮೇಲ್ನೋಟಕ್ಕೆ ಇದು ಹುಸಿ ಬಾಂಬ್‌ ಬೆದರಿಕೆಯಂತೆ ಕಂಡು ಬಂದಿದೆ. ಬಾಂಬ್ ಬೆದರಿಕೆ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾರ್ತಾ ಭಾರತಿ ವಾಟ್ಸ್ ಆ್ಯಪ್ ಚಾನೆಲ್ ಗೆ ಸೇರಲು https://whatsapp.com/channel/0029VaA8ju86LwHn9OQpEq28 ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News