×
Ad

ತಿಹಾರ್ ಜೈಲಿನಿಂದಲೇ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಸಿಬಿಐ

Update: 2024-06-25 22:51 IST

PC : PTI

ಹೊಸದಿಲ್ಲಿ : ಮದ್ಯ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ಮಂಗಳವಾರ ರಾತ್ರಿ ಬಂಧಿಸಿದೆ.

ನಾಳೆ ಬುಧವಾರ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ನಡೆಯಲಿತ್ತು. ಅದಕ್ಕಿಂತ ಮೊದಲೇ ಸಿಬಿಐ ಅವರನ್ನು ಬಂಧಿಸಿದೆ.

ಸೋಮವಾರ, ಕೇಂದ್ರ ತನಿಖಾ ಸಂಸ್ಥೆಯು ತಿಹಾರ್ ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಹೇಳಿಕೆಯನ್ನು ದಾಖಲಿಸಿತ್ತು. ಸಿಬಿಐ ನಾಳೆ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣಾ ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ ಎಂದು ತಿಳಿದು ಬಂದಿದೆ.

ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಎಎಪಿಯ ರಾಜ್ಯಸಭಾ ಸಂಸದ ಸಂಜಯ್ ಸಿಂಗ್, "ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆಯುವ ಸಾಧ್ಯತೆ ಇರುವ ಸಮಯದಲ್ಲಿ, ಕೇಂದ್ರವು ಪಿತೂರಿ ನಡೆಸುತ್ತಿದೆ ಎಂದು ನನಗೆ ಮೂಲಗಳು ತಿಳಿಸಿವೆ” ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News