×
Ad

ಕೇರಳದ ನರ್ಸ್ ನಿಮಿಷ ಪ್ರಿಯಾ ಗಲ್ಲು ಶಿಕ್ಷೆ ಮುಂದೂಡಿಕೆ: ವರದಿ

Update: 2025-07-15 13:51 IST

ನಿಮಿಷ ಪ್ರಿಯಾ

ಹೊಸದಿಲ್ಲಿ: ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾಳ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು onmanorama.com ವರದಿ ಮಾಡಿದೆ.

ಸಂತ್ರಸ್ತೆಯ ಕುಟುಂಬವು ಇನ್ನೂ ಕ್ಷಮಾದಾನಕ್ಕೆ ಅಥವಾ ʼಬ್ಲಡ್ ಮನಿʼ ಸ್ವೀಕರಿಸಲು ಒಪ್ಪಿಕೊಂಡಿಲ್ಲ ಎಂದು ʼಸೇವ್ ನಿಮಿಷ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್ʼ ಸದಸ್ಯ ಸ್ಯಾಮ್ಯುಯೆಲ್ ಜೆರೋಮ್ ಭಾಸ್ಕರನ್ ಹೇಳಿದ್ದಾರೆ.

2017ರಲ್ಲಿ ತನ್ನ ಯೆಮೆನ್‌ನ ವ್ಯವಹಾರ ಪಾಲುದಾರ ತಲಾಲ್ ಅಬ್ದೋ ಮಹ್ದಿ ಕೊಲೆಗೆ ಗಲ್ಲು ಶಿಕ್ಷೆಗೊಳಗಾದ ನಿಮಿಷ ಪ್ರಿಯಾ ಅವರನ್ನು ರಕ್ಷಿಸಲು ಮಾತುಕತೆಗಳು ನಡೆಯುತ್ತಿದೆ.

ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಮಾತುಕತೆ ಬಳಿಕ ಪ್ರಸಿದ್ಧ ಸೂಫಿ ವಿದ್ವಾಂಸ ಶೇಖ್ ಹಬೀಬ್ ಉಮರ್ ಈ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಿದ್ದರು. ಅವರ ಪ್ರತಿನಿಧಿಗಳು ತಲಾಲ್ ಅಬ್ದೋ ಮಹ್ದಿ ಅವರ ಸಹೋದರ ಸೇರಿದಂತೆ ಅವರ ಕುಟುಂಬದ ಜೊತೆ ನಿಕಟವಾಗಿ ಮಾತುಕತೆ ನಡೆಸಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News