×
Ad

ತೀವ್ರ ಉಷ್ಣತೆ, ಮಹಾರಾಷ್ಟ್ರದ ರ‍್ಯಾಲಿಯಲ್ಲಿ ಮೂರ್ಛೆ ಹೋದ ಕೇಂದ್ರ ಸಚಿವ ನಿತಿನ್ ಗಡ್ಕರಿ

Update: 2024-04-24 17:29 IST

Photo : NDTV

ಮುಂಬೈ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಂಗಳವಾರ ಮಧ್ಯಾಹ್ನ ಮಹಾರಾಷ್ಟ್ರದ ಯವತ್ಮಾಲ್‌ನಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡುವಾಗ ಪ್ರಜ್ಞೆ ತಪ್ಪಿ ಬಿದ್ದರು ಎಂದು ವರದಿಯಾಗಿದೆ. ಕೂಡಲೇ ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಯಿತು, ಸ್ವಲ್ಪ ವಿರಾಮದ ನಂತರ, ಅವರು ವೇದಿಕೆಗೆ ಹಿಂದಿರುಗಿ ಭಾಷಣವನ್ನು ಮುಂದುವರಿಸಿದರು ಎಂದು ತಿಳಿದು ಬಂದಿದೆ.

ತಮ್ಮ ಭಾಷಣವನ್ನು ಪೂರ್ಣಗೊಳಿಸಿದ ಸ್ವಲ್ಪ ಸಮಯದ ನಂತರ, ಗಡ್ಕರಿ ಅವರು ಎಕ್ಸ್ ನಲ್ಲಿ, “ಮಹಾರಾಷ್ಟ್ರದ ಪುಸಾದ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಬಿಸಿಲಿನ ತಾಪದಿಂದ ನನಗೆ ತೊಂದರೆಯಾಯಿತು. ಈಗ ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ. ಮುಂದಿನ ಸಭೆಗೆ ಹಾಜರಾಗಲು ವರುದ್‌ಗೆ ಹೋಗುತ್ತಿದ್ದೇನೆ. ನಿಮ್ಮ ಪ್ರೀತಿ ಮತ್ತು ಶುಭ ಹಾರೈಕೆಗಳಿಗೆ ಧನ್ಯವಾದಗಳು,” ಎಂದು ಪೋಸ್ಟ್ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News