×
Ad

ಬಿಹಾರದಲ್ಲಿ 125 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ : ಸಿಎಂ ನಿತೀಶ್ ಕುಮಾರ್ ಘೋಷಣೆ

Update: 2025-07-17 10:30 IST

Photo | Hindustan Times

ಪಾಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯದ ಎಲ್ಲಾ ಗ್ರಾಹಕರಿಗೆ 125 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಘೋಷಿಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸಿಎಂ ನಿತೀಶ್ ಕುಮಾರ್ ಈ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ನಾವು ಆರಂಭದಿಂದಲೂ ಕಡಿಮೆ ದರದಲ್ಲಿ ವಿದ್ಯುತ್ ಒದಗಿಸುತ್ತಿದ್ದೇವೆ ಎಂದು ಹೇಳಿದ್ದಾರೆ.   

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ನಿತೀಶ್ ಕುಮಾರ್, ಆಗಸ್ಟ್ 1ರಿಂದ ಅಂದರೆ ಜುಲೈ ಬಿಲ್‌ನಿಂದಲೇ ರಾಜ್ಯದ ಎಲ್ಲಾ ಗೃಹಬಳಕೆಯ ಗ್ರಾಹಕರು 125 ಯೂನಿಟ್‌ಗಳವರೆಗಿನ ವಿದ್ಯುತ್‌ಗೆ ಯಾವುದೇ ಹಣವನ್ನು ಪಾವತಿಸಬೇಕಾಗಿಲ್ಲ. ಈ ಯೋಜನೆಯಿಂದ ರಾಜ್ಯದ ಒಟ್ಟು 1 ಕೋಟಿ 67 ಲಕ್ಷ ಕುಟುಂಬಗಳಿಗೆ ಪ್ರಯೋಜನವಾಗಲಿದೆ. ಮುಂದಿನ ಮೂರು ವರ್ಷಗಳಲ್ಲಿ ಗೃಹಬಳಕೆದಾರರಿಂದ ಒಪ್ಪಿಗೆ ಪಡೆದ ನಂತರ ಅವರ ಮನೆಗಳ ಮೇಲ್ಛಾವಣಿಯ ಮೇಲೆ ಅಥವಾ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

ಕುಟೀರ ಜ್ಯೋತಿ ಯೋಜನೆಯಡಿಯಲ್ಲಿ ಬಡ ಕುಟುಂಬಗಳಿಗೆ ಸೌರ ವಿದ್ಯುತ್ ಸ್ಥಾವರ ಸ್ಥಾಪನೆಗೆ ಸಂಪೂರ್ಣ ವೆಚ್ಚವನ್ನು ರಾಜ್ಯ ಸರಕಾರ ಭರಿಸಲಿದೆ. ಉಳಿದವರಿಗೆ ಸರಕಾರ ಸೂಕ್ತ ಬೆಂಬಲವನ್ನು ನೀಡಲಿದೆ ಎಂದು ನಿತೀಶ್‌ ಕುಮಾರ್‌ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News