ಬಿಹಾರ: ರಾಜ್ಯಪಾಲರನ್ನು ಭೇಟಿ ಮಾಡಿದ ನಿತೀಶ್ ಕುಮಾರ್
Update: 2025-11-17 12:21 IST
ನಿತೀಶ್ ಕುಮಾರ್ (File Photo: PTI)
ಪಾಟ್ನಾ: ಬಿಹಾರದಲ್ಲಿ ಸರ್ಕಾರ ರಚನೆಯ ಚಟುವಟಿಕೆಗಳು ಚುರುಕುಗೊಳ್ಳುತ್ತಿರುವ ನಡುವೆಯೇ, ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಭೇಟಿಯಾದರು. ಬುಧವಾರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನವೆಂಬರ್ 20ರಂದು ಅವರು ಹತ್ತನೇ ಬಾರಿಗೆ ಮುಖ್ಯಮಂತ್ರಿ ಪದವಿಗೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇರುವುದರಿಂದ ಈ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಇದಕ್ಕೂ ಮುನ್ನ, ಎನ್‌ಡಿಎ ಶಾಸಕಾಂಗ ಪಕ್ಷವು ಸೋಮವಾರ ಸಭೆ ಸೇರಿ ನಿತೀಶ್ ಕುಮಾರ್ ಅವರನ್ನು ಮೈತ್ರಿಕೂಟದ ನಾಯಕನಾಗಿ ಅಧಿಕೃತವಾಗಿ ಆಯ್ಕೆ ಮಾಡುವುದಾಗಿ ಮೂಲಗಳು ತಿಳಿಸಿವೆ. ಸಭೆಯ ಬಳಿಕ ಸರ್ಕಾರ ರಚನೆ ಪ್ರಕ್ರಿಯೆ ಇನ್ನಷ್ಟು ವೇಗ ಪಡೆಯುವ ನಿರೀಕ್ಷೆಯಿದೆ.