×
Ad

ಅಟಲ್ ಬಿಹಾರಿ ವಾಜಪೇಯಿ ಸ್ಮಾರಕಕ್ಕೆ ಭೇಟಿ ನೀಡಿ ಶ್ರದ್ದಾಂಜಲಿ ಸಲ್ಲಿಸಿದ ನಿತೀಶ್ ಕುಮಾರ್

Update: 2023-08-16 14:44 IST

Photo- Twitter- @ANI

ಪಾಟ್ನಾ: ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಜೆಡಿಯು ನಾಯಕ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು ದಿಲ್ಲಿಗೆ ಆಗಮಿಸಿ ಮಾಜಿ ಪ್ರಧಾನಿ ವಾಜಪೇಯಿ ಪುಣ್ಯತಿಥಿಯ ಅಂಗವಾಗಿ ಶ್ರದ್ಧಾಂಜಲಿ ಸಲ್ಲಿಸಿದರು.

ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮಾರಕ ಸದೈವ್ ಅಟಲ್ ಗೆ ನಿತೀಶ್ ಕುಮಾರ್ ಭೇಟಿ ನೀಡಿದ್ದು, ಮಾಜಿ ಪ್ರಧಾನಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಬಿಜೆಪಿ ನಾಯಕರು ಸೇರಿದಂತೆ ಎನ್ ಡಿಎ ತಂಡವೂ ಅಲ್ಲಿತ್ತು.

ನಿತೀಶ್ ಕುಮಾರ್ ಅವರು ತಮ್ಮ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ, ಅವರನ್ನು ರಾಷ್ಟ್ರ ರಾಜಧಾನಿಯಲ್ಲಿ ಭೇಟಿಯಾಗುವ ಸಾಧ್ಯತೆಯಿದೆ.

ಪಾಟ್ನಾದಲ್ಲಿರುವ ಮುಖ್ಯಮಂತ್ರಿಗಳ ಕಚೇರಿ ಹೊರಡಿಸಿದ ಹೇಳಿಕೆಯ ಪ್ರಕಾರ, ಕುಮಾರ್ ಅವರು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಹಾರೈಸಿದ್ದಾರೆ.

ಈಗ I.N.D.I.A ಒಕ್ಕೂಟದ ಪ್ರಮುಖರಲ್ಲಿ ಒಬ್ಬರಾಗಿರುವ ನಿತೀಶ್ ಕುಮಾರ್ ಅವರು ಈ ತಿಂಗಳ ಕೊನೆಯಲ್ಲಿ ಮುಂಬೈನಲ್ಲಿ ನಡೆಯಲಿರುವ ಒಕ್ಕೂಟದ ಸಭೆಯ ಮೊದಲು ವಿರೋಧ ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸುವ ನಿರೀಕ್ಷೆಯಿದೆ.

ಅರವಿಂದ ಕೇಜ್ರಿವಾಲ್ ಜೊತೆಗೆ ಕಾಂಗ್ರೆಸ್ನ ಉನ್ನತ ನಾಯಕರೊಂದಿಗೆ ಕುಮಾರ್ ಸಭೆ ನಡೆಸಬಹುದು ಎಂದು ಜೆಡಿಯು ಮೂಲಗಳು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಕ್ಕೆ ತಿಳಿಸಿದ್ದರೂ, ಅವರ ದಿಲ್ಲಿ ಪ್ರವಾಸದ ವಿವರಗಳು ತಿಳಿದಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News