×
Ad

ಜೆಡಿಯು ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿತೀಶ್ ಕುಮಾರ್ ಆಪ್ತ ಕೆ.ಸಿ. ತ್ಯಾಗಿ

Update: 2024-09-01 11:29 IST

ಕೆಸಿ ತ್ಯಾಗಿ ಮತ್ತು ನಿತೀಶ್ ಕುಮಾರ್

ಪಾಟ್ನ: ಜೆಡಿಯುನ ಹಿರಿಯ ನಾಯಕ ಕೆಸಿ ತ್ಯಾಗಿ ಪಕ್ಷದ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ಸ್ಥಾನಕ್ಕೆ ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ರಾಜೀವ್ ರಂಜನ್ ಪ್ರಸಾದ್ ಅವರನ್ನು ನೇಮಕ ಮಾಡಿದ್ದಾರೆ.

ವೈಯಕ್ತಿಕ ಕಾರಣಗಳಿಗಾಗಿ ತ್ಯಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಪಕ್ಷವು ಹೇಳಿದ್ದರೂ, ಬಿಜೆಪಿ ನಾಯಕತ್ವಕ್ಕೆ ಹೊಂದಿಕೆಯಾಗದ ರೀತಿಯಲ್ಲಿ ಪ್ರಮುಖ ವಿಷಯಗಳ ಕುರಿತು ತ್ಯಾಗಿ ಅವರ ಹೇಳಿಕೆಗಳಿಗೆ ಪಕ್ಷಕ್ಕೆ ಇರಿಸುಮುರಿಸಾಗುತ್ತಿದೆ ಎನ್ನಲಾಗಿದೆ.

"ಜನತಾದಳ (ಯುನೈಟೆಡ್) ರಾಷ್ಟ್ರೀಯ ಅಧ್ಯಕ್ಷರಾದ ನಿತೀಶ್ ಕುಮಾರ್ (ಮುಖ್ಯಮಂತ್ರಿ, ಬಿಹಾರ) ಅವರು ರಾಜೀವ್ ರಂಜನ್ ಪ್ರಸಾದ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿದ್ದಾರೆ. ವಕ್ತಾರ ಹುದ್ದೆಗೆ ಕೆ.ಸಿ. ತ್ಯಾಗಿ ಅವರು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದಾರೆ." ಎಂದು ಜೆಡಿಯು ಹೇಳಿಕೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News