ತಮಿಳುನಾಡು ಮಾಜಿ ಸಿಎಂ, AIADMK ಉಚ್ಚಾಟಿತ ನಾಯಕ ಪನ್ನೀರ್‌ಸೆಲ್ವಂ ಡಿಎಂಕೆ ಪಕ್ಷಕ್ಕೆ ಸೇರ್ಪಡೆ
Update: 2026-02-27 10:40 IST
Photo| @the_hindu
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ, ಎಐಎಡಿಎಂಕೆ ಉಚ್ಚಾಟಿತ ನಾಯಕ ಓ ಪನ್ನೀರ್‌ಸೆಲ್ವಂ ಶುಕ್ರವಾರ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಮಾಜಿ ಸಿಎಂ ಪನ್ನೀರ್‌ಸೆಲ್ವಂ ಡಿಎಂಕೆ ಪಕ್ಷಕ್ಕೆ ಸೇರ್ಪಡೆ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದ ರಾಜಕೀಯದಲ್ಲಿ ಮಹತ್ವದ ತಿರುವು ನೀಡಿದೆ.
ಎಐಎಡಿಎಂಕೆ ಮಾಜಿ ಮುಖ್ಯಸ್ಥೆ, ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ದೀರ್ಘಕಾಲದ ನಿಷ್ಠಾವಂತರಾಗಿದ್ದ ಓ ಪನ್ನೀರ್‌ಸೆಲ್ವಂ ಅವರು ಚೆನ್ನೈನಲ್ಲಿರುವ ಡಿಎಂಕೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಸಮ್ಮುಖದಲ್ಲಿ ಡಿಎಂಕೆ ಪಕ್ಷಕ್ಕೆ ಔಪಚಾರಿಕವಾಗಿ ಸೇರ್ಪಡೆಗೊಂಡಿದ್ದಾರೆ.
ಮೂಲಗಳ ಪ್ರಕಾರ, ಮುಂಬರುವ ಚುನಾವಣೆಯಲ್ಲಿ ಒಪಿಎಸ್ ಅವರನ್ನು ಅವರ ತವರು ಕ್ಷೇತ್ರದಲ್ಲಿ ಡಿಎಂಕೆ ಸ್ಪರ್ಧೆಗೆ ಇಳಿಸುವ ಸಾಧ್ಯತೆ ಇದೆ.