×
Ad

ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿಗಳನ್ನು ಸೇರಿಸಬೇಕು: ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಆಗ್ರಹ

"ಇದು ನನ್ನ ಸ್ವಂತ ಜೀವನದ ಭಾವನಾತ್ಮಕ ಕ್ಷಣವಾಗಿದೆ. ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ನಿರ್ಧರಿಸಲು ಸಾಂವಿಧಾನಿಕ ತಿದ್ದುಪಡಿಯನ್ನು ನನ್ನ ಜೀವನ ಸಂಗಾತಿ ರಾಜೀವ್ ಗಾಂಧಿ ತಂದರು. ಅದನ್ನು ರಾಜ್ಯಸಭೆಯಲ್ಲಿ 7 ಮತಗಳಿಂದ ಸೋಲಿಸಲಾಯಿತು . ನಂತರ, ಪಿ.ವಿ. ನರಸಿಂಹರಾವ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರವು ರಾಜ್ಯಸಭೆಯಲ್ಲಿ ಅಂಗೀಕರಿಸಿತು. ಇದರ ಪರಿಣಾಮವಾಗಿ, ನಾವು ದೇಶಾದ್ಯಂತ ಸ್ಥಳೀಯ ಸಂಸ್ಥೆಗಳ ಮೂಲಕ ಚುನಾಯಿತರಾದ 15 ಲಕ್ಷ ಮಹಿಳಾ ನಾಯಕಿರನ್ನು ಹೊಂದಿದ್ದೇವೆ. ರಾಜೀವ್ ಗಾಂಧಿಯವರ ಕನಸು ಭಾಗಶಃ ಮಾತ್ರ ಪೂರ್ಣಗೊಂಡಿದೆ. ಈ ಮಸೂದೆಯ ಅಂಗೀಕಾರದೊಂದಿಗೆ ಅದು ಪೂರ್ಣಗೊಳ್ಳುತ್ತದೆ’’ಎಂದು ಸೋನಿಯಾ ಗಾಂಧಿ ತಮ್ಮ ಭಾಷಣದಲ್ಲಿ ಹೇಳಿದರು.

Update: 2023-09-20 12:04 IST

Photo: Twitter@NDTV

ಹೊಸದಿಲ್ಲಿ: ಲೋಕಸಭೆಯಲ್ಲಿ ಬುಧವಾರ ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದ ಚರ್ಚೆಯಲ್ಲಿ ವಿರೋಧ ಪಕ್ಷದಿಂದ ಮೊದಲಿಗರಾಗಿ ಮಾತನಾಡಿದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಪಕ್ಷವು ಮಹಿಳಾ ಮೀಸಲಾತಿ ಮಸೂದೆಯನ್ನುಬೆಂಬಲಿಸುತ್ತದೆ, ಆದರೆ ಮಹಿಳೆಯರಿಗೆ 33 ಶೇ. ಕೋಟಾದೊಳಗೆ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದರು.

"ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸುವಲ್ಲಿ ಯಾವುದೇ ವಿಳಂಬವು ಭಾರತೀಯ ಮಹಿಳೆಯರಿಗೆ ಎಸಗುವ ಘೋರ ಅನ್ಯಾಯವಾಗಿದೆ. ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣವೇ ಜಾರಿಗೊಳಿಸುವ ಮೂಲಕ ಅಗತ್ಯ ಮಾತ್ರವಲ್ಲದೆ ಸಾಧ್ಯವಿರುವ ಎಲ್ಲಾ ಅಡೆತಡೆಗಳನ್ನು ನಿವಾರಿಸಿ" ಎಂದು ಹೇಳಿದರು.

"ಇದು ನನ್ನ ಸ್ವಂತ ಜೀವನದ ಭಾವನಾತ್ಮಕ ಕ್ಷಣವಾಗಿದೆ. ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ನಿರ್ಧರಿಸಲು ಸಾಂವಿಧಾನಿಕ ತಿದ್ದುಪಡಿಯನ್ನು ನನ್ನ ಜೀವನ ಸಂಗಾತಿ ರಾಜೀವ್ ಗಾಂಧಿ ತಂದರು. ಅದನ್ನು ರಾಜ್ಯಸಭೆಯಲ್ಲಿ 7 ಮತಗಳಿಂದ ಸೋಲಿಸಲಾಯಿತು . ನಂತರ, ಪಿ.ವಿ. ನರಸಿಂಹರಾವ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರವು ರಾಜ್ಯಸಭೆಯಲ್ಲಿ ಅಂಗೀಕರಿಸಿತು. ಇದರ ಪರಿಣಾಮವಾಗಿ, ನಾವು ದೇಶಾದ್ಯಂತ ಸ್ಥಳೀಯ ಸಂಸ್ಥೆಗಳ ಮೂಲಕ ಚುನಾಯಿತರಾದ 15 ಲಕ್ಷ ಮಹಿಳಾ ನಾಯಕಿರನ್ನು ಹೊಂದಿದ್ದೇವೆ. ರಾಜೀವ್ ಗಾಂಧಿಯವರ ಕನಸು ಭಾಗಶಃ ಮಾತ್ರ ಪೂರ್ಣಗೊಂಡಿದೆ. ಈ ಮಸೂದೆಯ ಅಂಗೀಕಾರದೊಂದಿಗೆ ಅದು ಪೂರ್ಣಗೊಳ್ಳುತ್ತದೆ’’ಎಂದು ಸೋನಿಯಾ ಗಾಂಧಿ ತಮ್ಮ ಭಾಷಣದಲ್ಲಿ ಹೇಳಿದರು.

"ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪರವಾಗಿ, ನಾನು ಇಲ್ಲಿ ನಾರಿ ಶಕ್ತಿ ವಂದನ್ ಅಧಿನಿಯಮ್ ಅನ್ನು ಬೆಂಬಲಿಸುತ್ತೇನೆ. ಹೊಗೆಯಿಂದ ತುಂಬಿದ ಅಡುಗೆಮನೆಯಿಂದ ಫ್ಲಡ್-ಲೈಟ್ ಸ್ಟೇಡಿಯಂಗಳವರೆಗೆ, ಭಾರತೀಯ ಮಹಿಳೆಯ ಪ್ರಯಾಣವು ಸುದೀರ್ಘವಾಗಿದೆ. ಆದರೆ ಆಕೆ ಅಂತಿಮವಾಗಿ ತನ್ನ ಗಮ್ಯಸ್ಥಾನವನ್ನು ತಲುಪಿದ್ದಾಳೆ ಎಂದು ಹಿಂದಿಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News