×
Ad

ಒಡಿಶಾ: ನಿರ್ಮಾಣ ಹಂತದಲ್ಲಿದ್ದ ಮೋರಿ ಕುಸಿದು 4 ಮಕ್ಕಳು ಸಹಿತ 5 ಮಂದಿ ಮೃತ್ಯು

Update: 2023-07-31 13:43 IST

ರಾಯಗಡ,(ಒಡಿಶಾ) : ಒಡಿಶಾದ ರಾಯಗಡ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೋರಿ ಕುಸಿದು ಬಿದ್ದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲ್ಯಾಣಸಿಂಗ್ ಪುರ ಬ್ಲಾಕ್ ನ ಉಪರಸಜ ಗ್ರಾಮದಲ್ಲಿ ಸ್ನಾನ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಮೋರಿಯ ಕೆಳಗೆ ಶೇಖರಣೆಯಾದ ಮಳೆನೀರಿನಲ್ಲಿ ಸ್ನಾನ ಮಾಡುತ್ತಿದ್ದರು.

ಮೃತರಲ್ಲಿ ನಾಲ್ವರು ಮಕ್ಕಳು ಸೇರಿದ್ದಾರೆ. ಅಗ್ನಿಶಾಮಕ ದಳ ಮತ್ತು ಪೊಲೀಸರನ್ನು ಒಳಗೊಂಡ ರಕ್ಷಣಾ ತಂಡವು ಅವಶೇಷಗಳನ್ನು ತೆರವುಗೊಳಿಸಲು ಕೆಲಸ ಮಾಡುತ್ತಿದೆ. ಅವಶೇಷಗಳಡಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News