×
Ad

ಗ್ರಾಹಕರು ಬಳಸುವ ಮೊಬೈಲ್ ಆಧಾರದಲ್ಲಿ ಒಂದೇ ಸೇವೆಗೆ ವಿಭಿನ್ನ ದರ : ಆರೋಪ ತಳ್ಳಿ ಹಾಕಿದ ಓಲಾ, ಉಬರ್

Update: 2025-01-24 19:56 IST

OLA , UBER 

ಹೊಸದಿಲ್ಲಿ : ಓಲಾ ಮತ್ತು ಉಬರ್ ಕಂಪೆನಿಗಳು ಗ್ರಾಹಕರು ಬಳಸುವ ಮೊಬೈಲ್ ಆಧಾರದಲ್ಲಿ ಒಂದೇ ಸೇವೆಗೆ ವಿಭಿನ್ನ ದರಗಳನ್ನು ವಿಧಿಸುತ್ತದೆ ಎಂದು ವರದಿಗಳ ಬೆನ್ನಲ್ಲೇ ಗ್ರಾಹಕ ವ್ಯವಹಾರಗಳ ಸಚಿವಾಲಯ ಗುರುವಾರ ಓಲಾ ಮತ್ತು ಉಬರ್ ಸಂಸ್ಥೆಗಳಿಗೆ ನೋಟಿಸ್ ಜಾರಿಗೊಳಿಸಿತ್ತು. ಇದರ ಬೆನ್ನಲ್ಲೇ ಪ್ರತಿಕ್ರಿಯಿಸಿದ ಓಲಾ ಮತ್ತು ಉಬರ್ ಕಂಪೆನಿಗಳು ಗ್ರಾಹಕರ ಮೊಬೈಲ್ ಫೋನ್ ಆಧಾರದಲ್ಲಿ ದರವನ್ನು ನಿಗದಿಪಡಿಸಿಲ್ಲ ಎಂದು ಆರೋಪವನ್ನು ತಳ್ಳಿ ಹಾಕಿದೆ.

ಗ್ರಾಹಕರು iPhone ಅಥವಾ Android ಮೊಬೈಲ್ ಬಳಕೆ ಮಾಡುತ್ತಿದ್ದಾರೆಯೇ ಎಂಬುವುದರ ಆಧಾರದ ಮೇಲೆ ಓಲಾ ಮತ್ತು ಉಬರ್ ಕಂಪೆನಿಗಳು ಒಂದೇ ಸೇವೆಗೆ ವಿಭಿನ್ನ ದರಗಳನ್ನು ವಿಧಿಸುತ್ತಿರುವ ವರದಿಗಳ ನಂತರ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ(CCPA) ಓಲಾ ಮತ್ತು ಉಬರ್ ಕಂಪೆನಿಗಳಿಗೆ ನೋಟಿಸ್ ನೀಡಿತ್ತು.

ಓಲಾ ವಕ್ತಾರರು ಈ ಕುರಿತು ಪ್ರತಿಕ್ರಿಯಿಸುತ್ತಾ, ನಮ್ಮ ಎಲ್ಲಾ ಗ್ರಾಹಕರಿಗೆ ನಾವು ಏಕರೂಪದ ದರ ಹೊಂದಿದ್ದೇವೆ ಮತ್ತು ಸೆಲ್‌ ಫೋನ್ ಆಧರಿಸಿ ನಾವು ವ್ಯತ್ಯಾಸವನ್ನು ಮಾಡುವುದಿಲ್ಲ. ನಾವು ಇಂದು CCPAಗೆ ಅದನ್ನೇ ಸ್ಪಷ್ಟಪಡಿಸಿದ್ದೇವೆ. ಈ ವಿಷಯದಲ್ಲಿ ಯಾವುದೇ ತಪ್ಪು ತಿಳುವಳಿಕೆಯನ್ನು ನಿವಾರಿಸಲು ನಾವು ಅವರೊಂದಿಗೆ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.

ಉಬರ್ ವಕ್ತಾರರು ಈ ಕುರಿತು ಪ್ರತಿಕ್ರಿಯಿಸಿದ್ದು, ನಾವು ಗ್ರಾಹಕರ ಫೋನ್ ಆಧಾರದಲ್ಲಿ ಬೆಲೆಗಳನ್ನು ನಿಗದಿಪಡಿಸುವುದಿಲ್ಲ. ಯಾವುದೇ ತಪ್ಪು ತಿಳುವಳಿಕೆಯನ್ನು ತೆರವುಗೊಳಿಸಲು CCPAಯೊಂದಿಗೆ ಕೆಲಸ ಮಾಡಲು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News