ಲೋಕಸಭೆಯಲ್ಲಿ ನೀಟ್ ಹಗರಣದ ಚರ್ಚೆಗೆ ಅವಕಾಶ ನಿರಾಕರಣೆ: ಸಭಾತ್ಯಾಗ ಮಾಡಿದ ವಿರೋಧ ಪಕ್ಷಗಳು
Update: 2024-07-01 12:46 IST
Photo:X/@ani_digital
ಹೊಸದಿಲ್ಲಿ: ಸದನದಲ್ಲಿ ನೀಟ್ ಹಗರಣದ ಕುರಿತು ಚರ್ಚೆ ನಡೆಸಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷಗಳು ಲೋಕಸಭೆಯಿಂದ ಸಭಾತ್ಯಾಗ ಮಾಡಿದವು.
ಸದನದ ಕಲಾಪ ಪ್ರಾರಂಭಗೊಳ್ಳುತ್ತಿದ್ದಂತೆಯೇ ನೀಟ್ ಹಗರಣವನ್ನು ಪ್ರಸ್ತಾಪಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ, ಒಂದು ದಿನದ ಮಟ್ಟಿಗೆ ನೀಟ್ ಹಗರಣದ ಕುರಿತು ಚರ್ಚೆ ನಡೆಯಬೇಕು ಎಂದು ಆಗ್ರಹಿಸಿದರು.
ಆದರೆ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇದಕ್ಕೆ ಅವಕಾಶ ನಿರಾಕರಿಸಿದ್ದನ್ನು ಪ್ರತಿಭಟಿಸಿ ವಿರೋಧ ಪಕ್ಷಗಳು ಲೋಕಸಭೆಯಿಂದ ಸಭಾತ್ಯಾಗ ಮಾಡಿದವು.