×
Ad

ವಿಪಕ್ಷ ಒಕ್ಕೂಟದ 2ನೇ ಸಭೆ ಬೆಂಗಳೂರಿನಲ್ಲಿ, ಶಿಮ್ಲಾದಲ್ಲಲ್ಲ

Update: 2023-06-29 23:21 IST
ಪೋಟೊ- PTI

ಬೆಂಗಳೂರು: 'ಮುಂದಿನ ವಿಪಕ್ಷಗಳ ಸಭೆ ಜುಲೈ 13 ರಿಂದ ಎರಡು ದಿನ ಬೆಂಗಳೂರಿನಲ್ಲಿ ನಡೆಯಲಿದೆ' ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ. 

ಪುಣೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಎಇದ ಅವರು, ಈ ಹಿಂದೆ ಶಿಮ್ಸಾದಲ್ಲಿ ಸಭೆ ನಡೆಯಲಿದೆ ಎಂದು ಹೇಳಲಾಗಿತ್ತು. ಆದರೆ, ಶಿಮ್ಲಾದ ಮುಂಗಾರು ವಾತಾವರಣದ ಹಿನ್ನೆಲೆಯಲ್ಲಿ ಸಭೆಯ ಸ್ಥಳವನ್ನು ಶಿಮ್ಲಾದಿಂದ ಬೆಂಗಳೂರಿಗೆ ಬದಲಿಸಲಾಗಿದೆ ಎಂದು ಅವರು ತಿಳಿಸಿದರು. 

2024ರ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಬಿಜೆಪಿ ಸೋಲಿಸುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲು ಕಳೆದ ವಾರ ಪಾಟ್ನಾದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯೋಜಿಸಿದ್ದ ಸಭೆಯಲ್ಲಿ 17 ವಿರೋಧ ಪಕ್ಷಗಳು ಪಾಲ್ಗೊಂಡಿದ್ದವು. ಅಲ್ಲದೇ ಸಭೆ ನಂತರ ಮಾತನಾಡಿದ್ದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಂದಿನ ಸಭೆಯನ್ನು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಆಯೋಜಿಸಲಾಗುವುದು ಎಂದು ಹೇಳಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News