×
Ad

ಬಿಜೆಪಿ ಸೋಲಿಸುವುದೇ ನಮ್ಮ ಗುರಿ: ಅರವಿಂದ ಕೇಜ್ರಿವಾಲ್

Update: 2023-07-18 16:59 IST

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟವನ್ನು ಸೋಲಿಸುವುದೇ ನಮ್ಮ ಪ್ರಮುಖ ಗುರಿ ಎಂದು ಎಎಪಿ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ 26 ವಿವಿಧ ಪಕ್ಷಗಳ ರಾಜಕೀಯ ನಾಯಕರು ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಸರ್ವಾನು ಮತದಿಂದ ಬಿಜೆಪಿ ವಿರುದ್ಧ ಹೋರಾಡುವ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು. 

ವಿರೋಧ ಪಕ್ಷಗಳ ಮೈತ್ರಿಕೂಟದ ಹಲವು ನಾಯಕರು ಈ ಸಭೆಯಲ್ಲಿ ಪಾಲ್ಗೊಂಡಿದ್ದು, ಕೇಂದ್ರದಲ್ಲಿ ಬಿಜೆಪಿಗೆ ಪರ್ಯಾಯವಾಗಿ ಸರ್ಕಾರ ರಚಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News