×
Ad

Bihar | ಸರಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ 70 ವಿದ್ಯಾರ್ಥಿಗಳು ಅಸ್ವಸ್ಥ: ಪೋಷಕರಿಂದ ಆಕ್ರೋಶ

Update: 2026-02-09 11:22 IST

ಮಧೇಪುರ: ಮಾಧೇಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಾಹುಗಢ ಗ್ರಾಮದ ಕರು ಟೋಲಾದ ಅಪ್‌ಗ್ರೇಡ್ ಮಿಡಲ್ ಶಾಲೆಯಲ್ಲಿ ಶನಿವಾರ ಮಧ್ಯಾಹ್ನ ಬಿಸಿಯೂಟ ಸೇವಿಸಿ 70 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದ ಎಲ್ಲಾ ಮಕ್ಕಳನ್ನು ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಕ್ಕಳ ಆರೋಗ್ಯ ಸ್ಥಿರವಾಗಿದ್ದರೂ, ಒಬ್ಬ ಬಾಲಕಿಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. 

ಊಟ ಮಾಡಿದ ಸ್ವಲ್ಪ ಸಮಯದ ನಂತರ ಮಕ್ಕಳಲ್ಲಿ ವಾಂತಿ, ಹೊಟ್ಟೆ ನೋವು ಮತ್ತು ಅಸ್ವಸ್ಥತೆ ಕಂಡು ಬಂದಿದೆ.  ಮಕ್ಕಳನ್ನು ಆಂಬ್ಯುಲೆನ್ಸ್‌ ಮೂಲಕ  ಆಸ್ಪತ್ರೆಗೆ ದಾಖಲಿಸಲಾಗಿದೆ.  ಆತಂಕಗೊಂಡ ಪೋಷಕರು ಆಸ್ಪತ್ರೆಯಲ್ಲಿ ಜಮಾಯಿಸಿ ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಘಟನೆಗೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.  

ಜಿಲ್ಲಾ ಶಿಕ್ಷಣಾಧಿಕಾರಿ ಸಂಜಯ್ ಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. "ಶಾಲೆಗೆ ಮಧ್ಯಾಹ್ನದ ಊಟವನ್ನು ಸರಕಾರೇತರ ಸಂಸ್ಥೆಯು ವಿತರಿಸುತ್ತಿದೆ. ಘಟನೆ ಬಗ್ಗೆ ಈಗಾಗಲೇ ತನಿಖೆ ಆರಂಭವಾಗಿದೆ. ಆಹಾರದ ಗುಣಮಟ್ಟ, ಪೂರೈಕೆ ಮತ್ತು ವಿತರಣೆಗೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ಕೂಲಂಕಷವಾಗಿ ತನಿಖೆ ನಡೆಸಲಾಗುತ್ತಿದೆ" ಎಂದು ಹೇಳಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News