ಪಾಕಿಸ್ತಾನದ ಬೋಟ್‌ನಿಂದ 600 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಡಿಸಿಕೊಂಡ ಕೋಸ್ಟಲ್ ಗಾರ್ಡ್ | 14 ಮಂದಿಯ ಬಂಧನ

Update: 2024-04-28 12:48 GMT

PC : X/@IndiaCoastGuard

ಪೋರ್ ಬಂದರ್ : ಇಂಡಿಯನ್ ಕೋಸ್ಟಲ್ ಗಾರ್ಡ್, ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಮಾದಕವಸ್ತು ನಿಯಂತ್ರಣ ಸಂಸ್ಥೆ (ಎನ್‌ಸಿಬಿ) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಬೋಟ್‌ನಿಂದ ಸುಮಾರು 600 ಕೋಟಿ ರೂ. ಮೌಲ್ಯದ ಡಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 14 ಪಾಕಿಸ್ತಾನದ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಇಂಡಿಯನ್‌ ಕೋಸ್ಟಲ್‌ ಗಾರ್ಡ್ ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಗುಪ್ತಚರ ಮಾಹಿತಿಯಂತೆ ಅರಬ್ಬಿ ಸಮುದ್ರದಲ್ಲಿ ಪೋರ್‌ಬಂದರ್‌ನಿಂದ ಪಶ್ಚಿಮಕ್ಕೆ 86 ಕೆ.ಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಡ್ರಗ್ಸ್‌ ಮೌಲ್ಯ 600 ಕೋಟಿ ರೂ. ಎಂದು ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - musaveer

contributor

Byline - ವಾರ್ತಾಭಾರತಿ

contributor

Similar News