ʼಆಪರೇಷನ್ ಸಿಂಧೂರ್ʼ | 6 ಸ್ಥಳಗಳ ಮೇಲೆ ದಾಳಿ, 8 ಜನರು ಮೃತ್ಯು: ಪಾಕಿಸ್ತಾನದ ಹೇಳಿಕೆ
Update: 2025-05-07 06:47 IST
Photo credit: AP
ಹೊಸದಿಲ್ಲಿ: ಭಾರತವು ಪಾಕಿಸ್ತಾನದ 6 ಸ್ಥಳಗಳಲ್ಲಿ ದಾಳಿ ನಡೆಸಿದ್ದು, 24 ಸ್ಥಳಗಳ ಮೇಲೆ ಪರಿಣಾಮ ಬೀರಿದೆ ಎಂದು ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಮಹಾನಿರ್ದೇಶಕರು ತಿಳಿಸಿದ್ದಾರೆ.
ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 22 ಜನರು ಗಾಯಗೊಂಡಿದ್ದಾರೆ ಎಂದು ಅವರು ದೃಢಪಡಿಸಿದ್ದಾರೆ.
ಆಪರೇಷನ್ ಸಿಂಧೂರ್ ಎಂಬ ಹೆಸರಿನ ಕಾರ್ಯಾಚರಣೆಯಲ್ಲಿ ಭಾರತವು ಪಾಕಿಸ್ತಾನದ ನೆಲೆಗಳ ಮೇಲೆ ಬುಧವಾರ ತಡರಾತ್ರಿ ವೈಮಾನಿಕ ದಾಳಿ ನಡೆಸಿತು. ಪಹಲ್ಗಾಮ್ ನಲ್ಲಿ ಎ.22 ರಂದು ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಈ ದಾಳಿ ನಡೆಸಿದೆ.