×
Ad

ಜಮ್ಮುಕಾಶ್ಮೀರ | ಪಾಕಿಸ್ತಾನದ ಶೆಲ್ ದಾಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಮೃತ್ಯು , ಇಬ್ಬರು ಸಿಬ್ಬಂದಿಗೆ ಗಾಯ

Update: 2025-05-10 09:58 IST
Photo | PTI

ಶ್ರೀನಗರ : ಜಮ್ಮುಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ಜಮ್ಮು ಕಾಶ್ಮೀರದ ಹಿರಿಯ ಸರಕಾರಿ ಅಧಿಕಾರಿ ಮೃತಪಟ್ಟಿದ್ದು, ಇಬ್ಬರು ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಥಾಪಾ ಅವರ ನಿವಾಸಕ್ಕೆ ಪಾಕಿಸ್ತಾನದ ಫಿರಂಗಿ ಶೆಲ್ ಬಡಿದಿದೆ. ಈ ವೇಳೆ ರಾಜ್ ಕುಮಾರ್ ಥಾಪಾ ಮತ್ತು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು. ಆದರೆ ಥಾಪಾ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಮತ್ತು ಇಬ್ಬರು ಸಿಬ್ಬಂದಿಗಳ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಜಮ್ಮುಕಾಶ್ಮೀರ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ, ʼಈ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಲು ಪದಗಳಿಲ್ಲ. ನಾವು ಸಮರ್ಥ ಅಧಿಕಾರಿಯನ್ನು ಕಳೆದುಕೊಂಡಿದ್ದೇವೆ. ಇಂದು ರಾಜೌರಿ ಪಟ್ಟಣವನ್ನು ಗುರಿಯಾಗಿಸಿಕೊಂಡು ಪಾಕ್ ಶೆಲ್ ದಾಳಿ ನಡೆಸಿದಾಗ ಅಧಿಕಾರಿಯ ನಿವಾಸಕ್ಕೆ ಗುಂಡು ತಗುಲಿತು. ನಮ್ಮ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಪ್ಪಾ ಮೃತಪಟ್ಟಿದ್ದಾರೆ. ಘಟನೆಗೆ ಕೆಲವು ಗಂಟೆಗಳ ಮೊದಲು ಅವರು ಆನ್‌ಲೈನ್‌ ಸಭೆಯಲ್ಲಿ ಭಾಗವಹಿಸಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿʼ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News