×
Ad

Parliament Budget Session| ರಾಹುಲ್‌ ಗಾಂಧಿ ವಿರುದ್ಧ ನಿಶಿಕಾಂತ್‌ ದುಬೆ ನೋಟಿಸ್‌: ಲೋಕಸಭಾ ಸದಸ್ಯತ್ವ ರದ್ದತಿಗೆ ಆಗ್ರಹ

Update: 2026-02-12 12:04 IST

ರಾಹುಲ್‌ ಗಾಂಧಿ (Photo: PTI)

ಹೊಸದಿಲ್ಲಿ: ಸಂಸತ್ತಿನ ಬಜೆಟ್‌ ಅಧಿವೇಶನದಲ್ಲಿ ಗುರುವಾರ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯನ್ನು ಸಂಸತ್‌ನಿಂದ ಉಚ್ಚಾಟಿಸಬೇಕು ಹಾಗೂ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಜೀವನಪರ್ಯಂತ ನಿಷೇಧಿಸಬೇಕು ಎಂದು ಕೋರುವ ನಿರ್ಣಯವನ್ನು ಮಂಡಿಸಲು ಅನುಮತಿ ಕೋರಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಗುರುವಾರ ನೋಟಿಸ್ ನೀಡಿದ್ದಾರೆ.

ಬುಧವಾರ ಭಾರತ-ಅಮೆರಿಕ ವ್ಯಾಪಾರ ಒಪ್ಪಂದ, ಕೇಂದ್ರ ಬಜೆಟ್ ಅನ್ನು ಟೀಕಿಸಿ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಭಾಷಣ ಮಾಡಿದ್ದರು. ಇದಾದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ಇದು ವಿಶೇಷ ಹಕ್ಕುಚ್ಯುತಿ ನೋಟಿಸ್ ಅಲ್ಲ. ನಾನು ಒಂದು ಪ್ರಮುಖ ಪ್ರಸ್ತಾವನೆಯನ್ನು ಸಲ್ಲಿಸಿದ್ದೇನೆ. ಅದರಲ್ಲಿ ರಾಹುಲ್ ಗಾಂಧಿ ಅವರು ಸೊರೋಸ್ ಫೌಂಡೇಶನ್, ಫೋರ್ಡ್ ಫೌಂಡೇಶನ್, ಯುಎಸ್ಎಐಡಿ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎನ್ನುವ ಆರೋಪಗಳನ್ನು ಉಲ್ಲೇಖಿಸಿದ್ದೇನೆ. ರಾಹುಲ್‌ ಗಾಂಧಿ ಅವರು ಥೈಲ್ಯಾಂಡ್, ಕಂಬೋಡಿಯಾ, ವಿಯೆಟ್ನಾಂ ಹಾಗೂ ಅಮೆರಿಕಾ ಮುಂತಾದ ದೇಶಗಳಿಗೆ ಭೇಟಿ ನೀಡಿರುವುದು ಮತ್ತು ಭಾರತ ವಿರೋಧಿ ಶಕ್ತಿಗಳೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ಪ್ರಸ್ತಾಪಿಸಿದ್ದೇನೆ. ಅವರ ಸಂಸದೀಯ ಸದಸ್ಯತ್ವವನ್ನು ರದ್ದುಗೊಳಿಸಬೇಕು ಹಾಗೂ ಜೀವಿತಾವಧಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ನಾನು ಆಗ್ರಹಿಸಿದ್ದೇನೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News