×
Ad

ಅದಾನಿ ಭ್ರಷ್ಟಾಚಾರ ಕುರಿತು ಅಮೆರಿಕ ತನಿಖೆ ನಡೆಸುತ್ತಿರುವುದರಿಂದ ಟ್ರಂಪ್‌ ಬೆದರಿಕೆಗೆ ಪ್ರಧಾನಿ ಮೋದಿ ತಿರುಗೇಟು ನೀಡುತ್ತಿಲ್ಲ: ರಾಹುಲ್ ಗಾಂಧಿ

Update: 2025-08-06 12:41 IST

ರಾಹುಲ್ ಗಾಂಧಿ (Photo: PTI)

ಹೊಸದಿಲ್ಲಿ: ಅದಾನಿ ಭ್ರಷ್ಟಾಚಾರ ಆರೋಪದ ಕುರಿತು ಅಮೆರಿಕ ತನಿಖೆ ನಡೆಸುತ್ತಿರುವುದರಿಂದಾಗಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರಂತರ ಬೆದರಿಕೆ ಒಡ್ಡುತ್ತಿದ್ದರೂ ತಿರುಗೇಟು ನೀಡಲು ಪ್ರಧಾನಿ ಮೋದಿ ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಬುಧವಾರ ಕಾಂಗ್ರೆಸ್ ನಾಯಕ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಭಾರತ ಉತ್ತಮ ವ್ಯಾವಹಾರಿಕ ಪಾಲುದಾರನಲ್ಲ ಎಂದು ಹೇಳಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ರಶ್ಯದಿಂದ ತೈಲ ಖರೀದಿಸುತ್ತಿರುವುದರಿಂದ ಮುಂದಿನ 24 ಗಂಟೆಗಳಲ್ಲಿ ಅದರ ಮೇಲಿನ ಸುಂಕವನ್ನು ಗಮನಾರ್ಹವಾಗಿ ಹೆಚ್ಚಳ ಮಾಡಲಾಗುವುದು ಎಂದು ಘೋಷಿಸಿದ ಬೆನ್ನಿಗೇ ರಾಹುಲ್ ಗಾಂಧಿಯಿಂದ ಈ ಹೇಳಿಕೆ ಹೊರ ಬಿದ್ದಿದೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಭಾರತ ದಯವಿಟ್ಟು ಅರ್ಥ ಮಾಡಿಕೊಳ್ಳಿ. ಅದಾನಿ ಭ್ರಷ್ಟಾಚಾರ ಆರೋಪದ ಕುರಿತು ಅಮೆರಿಕ ತನಿಖೆ ನಡೆಸುತ್ತಿರುವುದರಿಂದ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರಂತರ ಬೆದರಿಕೆ ಒಡ್ಡುತ್ತಿದ್ದರೂ ತಿರುಗೇಟು ನೀಡಲು ಪ್ರಧಾನಿ ಮೋದಿಗೆ ಸಾಧ್ಯವಾಗುತ್ತಿಲ್ಲ” ಎಂದು ಬರೆದುಕೊಂಡಿದ್ದಾರೆ.

“ಒಂದು ಬೆದರಿಕೆಯು ಮೋದಿ ಮತ್ತು ಅದಾನಿ-ಅಂಬಾನಿ ನಡುವಿನ ಹಣಕಾಸು ಸಂಬಂಧಗಳು ಹಾಗೂ ರಶ್ಯ ತೈಲ ಒಪ್ಪಂದವನ್ನು ಬಯಲು ಮಾಡುವ ಉದ್ದೇಶ ಹೊಂದಿದೆ” ಎಂದು ಅವರು ಆರೋಪಿಸಿದ್ದಾರೆ.

ರಾಹುಲ್ ಗಾಂಧಿಯವರ ಈ ಆರೋಪದ ಕುರಿತು ಕೇಂದ್ರ ಸರಕಾರದಿಂದಾಗಲಿ ಅಥವಾ ಅದಾನಿ ಸಮೂಹದಿಂದಾಗಲಿ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಹೊರ ಬಿದ್ದಿಲ್ಲ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News