×
Ad

ಉಪರಾಷ್ಟ್ರಪತಿ ಚುನಾವಣೆ | ಸಂಸತ್ ಭವನದಲ್ಲಿ ಮತದಾನ ಆರಂಭ

Update: 2025-09-09 10:20 IST

ಹೊಸದಿಲ್ಲಿ : ಉಪರಾಷ್ಟ್ರಪತಿ ಚುನಾವಣೆಗೆ ಸಂಸತ್‌ ಭವನದಲ್ಲಿ ಮತದಾನ ಪ್ರಾರಂಭವಾಗಿದ್ದು, ಪ್ರಧಾನಿ ಮೋದಿ ಮೊದಲು ಮತವನ್ನು ಚಲಾಯಿಸಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಮತ್ತು ವಿರೋಧ ಪಕ್ಷದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ಅವರ ಮಧ್ಯೆ ನೇರ ಸ್ಪರ್ಧೆ ನಡೆಯುತ್ತಿದೆ.

ಮತದಾನವು ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಮತ ಎಣಿಕೆ ಸಂಜೆ 6 ಗಂಟೆಯ ನಂತರ ಪ್ರಾರಂಭವಾಗಲಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News