7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ : ಕ್ಸಿ ಜಿನ್‌ಪಿಂಗ್ ಜೊತೆ ಮಹತ್ವದ ಮಾತುಕತೆ
Photo | AP
ಟಿಯಾಂಜಿನ್ : ಅಮೆರಿಕದ ಸುಂಕ ಸಂಘರ್ಷ ಪ್ರಪಂಚದ ಬಹುತೇಕ ಆರ್ಥಿಕತೆಗಳ ಮೇಲೆ ಪರಿಣಾಮ ಬೀರಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟಿಯಾಂಜಿನ್‌ನಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.
7 ವರ್ಷಗಳ ನಂತರ ಎರಡು ದಿನಗಳ ಭೇಟಿಗಾಗಿ ಪ್ರಧಾನಿ ಮೋದಿ ಶನಿವಾರ ಚೀನಾಕ್ಕೆ ತೆರಳಿದ್ದಾರೆ. ಅಮೆರಿಕ ಜೊತೆಗಿನ ವ್ಯಾಪಾರ ಮತ್ತು ಸುಂಕ ನೀತಿಯಿಂದ ಉಂಟಾದ ಭಾರತ ಮತ್ತು ಅಮೆರಿಕ ಸಂಬಂಧಗಳಲ್ಲಿನ ಬಿರುಕಿನ ಹಿನ್ನೆಲೆಯಲ್ಲಿ ಈ ಭೇಟಿ ತೀವ್ರ ಕುತೂಹಲ ಮೂಡಿಸಿದೆ.
ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ನಡೆಯುವ ವಾರ್ಷಿಕ SCO ಶೃಂಗಸಭೆಯಲ್ಲಿ ಭಾಗವಹಿಸಲು ಮೋದಿ ಉತ್ತರ ಚೀನಾದ ಟಿಯಾಂಜಿನ್‌ಗೆ ಭೇಟಿ ನೀಡಿದ್ದಾರೆ.
ಎರಡು ದೇಶಗಳ ನಾಯಕರು ಭಾರತ-ಚೀನಾ ನಡುವಿನ ಆರ್ಥಿಕ ಸಂಬಂಧಗಳನ್ನು ಬಲಪಡಿಸುವ ಮತ್ತು ಪೂರ್ವ ಲಡಾಖ್ ಗಡಿ ವಿವಾದದ ನಂತರ ಹಳಸಿದ ಸಂಬಂಧಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.