×
Ad

ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಆರೆಸ್ಸೆಸ್ ಕೇಂದ್ರ ಕಚೇರಿಗೆ ಮೋದಿ ಭೇಟಿ

Update: 2025-03-30 12:42 IST

Photo credit: X/@narendramodi

ನಾಗ್ಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ ರವಿವಾರ ನಾಗ್ಪುರದ ರೇಶಿಮ್ ಭಾಗ್‌ನಲ್ಲಿರುವ ಡಾ. ಹೆಡಗೇವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿ ಆರೆಸ್ಸೆಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಮತ್ತು ಎರಡನೇ ಸರಸಂಘ ಸಂಚಾಲಕ ಎಂಎಸ್ ಗೋಳ್ವಾಲ್ಕರ್ ಅವರ ಸ್ಮಾರಕಗಳಿಗೆ ಗೌರವ ಸಲ್ಲಿಸಿದರು.

ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಮೋದಿ ಆರೆಸ್ಸೆಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದು, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಸುರೇಶ್ ಭಯ್ಯಾಜಿ ಜೋಶಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸ್ಮೃತಿ ಭವನದಲ್ಲಿ ಆರೆಸ್ಸೆಸ್ ಕಚೇರಿಯ ಪದಾಧಿಕಾರಿಗಳನ್ನು ಭೇಟಿ ಮಾಡಿದ ಪ್ರಧಾನಿ ಮೋದಿ ಅವರ ಜೊತೆ ಫೋಟೊ ತೆಗೆಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News