×
Ad

VB–G RAM G ಮಸೂದೆಗೆ ರಾಷ್ಟ್ರಪತಿ ಅಂಕಿತ

Update: 2025-12-21 17:55 IST

ದ್ರೌಪದಿ ಮುರ್ಮು | Photo Credit : PTI

ಹೊಸದಿಲ್ಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂನರೇಗಾ) ಸ್ಥಾನಕ್ಕೆ ತರಲಾಗಿರುವ ವಿಬಿ-ಜಿ ರಾಮ್ ಜಿ ಕಾಯ್ದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ.

ಇದು ಇನ್ನು ಕಾಯ್ದೆಯಾಗಿ ಜಾರಿಗೆ ಬರಲಿದೆ.

ವಿಬಿ- ಜಿ ರಾಮ್ ಜಿ ಕಾಯ್ದೆ ಗ್ರಾಮೀಣ ಪ್ರದೇಶದಲ್ಲಿ 125 ದಿನಗಳ ಉದ್ಯೋಗ ಖಾತರಿ ಹಾಗೂ ವಿಕಸಿತ ಭಾರತ್ 2047ರ ಕಲ್ಪನೆಯೊಂದಿಗೆ ಜೀವನೋಪಾಯ ಭದ್ರತೆಯೊಂದಿಗೆ ಸಮೀಕರಿಸುವ ಉದ್ದೇಶವನ್ನು ಹೊಂದಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಕಸಿತ ಭಾರತ-ಉದ್ಯೋಗ ಖಾತರಿ ಹಾಗೂ ಅಜೀವಿಕ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ, 2025ಕ್ಕೆ ಅಂಕಿತ ಹಾಕಿದ್ದಾರೆ. ಈ ಮಸೂದೆಯನ್ನು ಸಂಸತ್ತಿನಲ್ಲಿ ಈ ವಾರದ ಆರಂಭದಲ್ಲಿ ಅಂಗೀಕರಿಸಲಾಗಿತ್ತು ಎಂದು ಗ್ರಾಮೀಣ ಅಭಿವೃದ್ಧಿ ಸಚಿವಾಲಯ ರವಿವಾರ ತಿಳಿಸಿದೆ.

ವಿಬಿ-ಜಿ ರಾಮ್ ಜಿ ಕಾಯ್ದೆ, 2025 ಗ್ರಾಮೀಣ ಕುಟುಂಬಗಳಿಗೆ ಪ್ರತಿ ಹಣಕಾಸು ವರ್ಷಕ್ಕೆ 125 ದಿನಗಳ ಉದ್ಯೋಗದ ಶಾಸನಾತ್ಮಕ ಖಾತರಿ ನೀಡಲಿದೆ. ಇದು ಸಬಲೀಕರಣ ಮತ್ತು ಸಮಗ್ರ ಬೆಳವಣಿಗೆಯನ್ನು ಉತ್ತೇಜಿಸುವ ಗುರಿ ಹೊಂದಿದೆ.

ಈ ಕಾಯ್ದೆ ಭಾರತದ ಗ್ರಾಮೀಣ ಉದ್ಯೋಗ ಹಾಗೂ ಅಭಿವೃದ್ಧಿ ವಿನ್ಯಾಸದಲ್ಲಿ ಪ್ರಮುಖ ಸುಧಾರಣೆ ತರಲಿದೆ ಎಂದು ಕೇಂದ್ರ ಸರಕಾರ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News