ಮತದಾರರ ಪಟ್ಟಿಯಿಂದ ತಮ್ಮ ಹೆಸರು ತೆಗೆಯಲು ಚುನಾವಣಾ ಅಧಿಕಾರಿಗಳ ಮೇಲೆ ಒತ್ತಡ: ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಆರೋಪ
ಸುಬ್ರಮಣಿಯನ್ ಸ್ವಾಮಿ | Photo Credit : PTI
ಹೊಸದಿಲ್ಲಿ, ಸೆ. 19: ಮತದಾರರ ಪಟ್ಟಿಯಿಂದ ತಮ್ಮ ಹೆಸರನ್ನು ತೆಗೆದುಹಾಕುವಂತೆ ಚುನಾವಣಾ ಆಯೋಗದ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ತಿಳಿದು ತಮಗೆ ಆಶ್ಚರ್ಯವಾಗಿದೆ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.
ಶನಿವಾರ ‘ಎಕ್ಸ್’ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ‘ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಚುನಾವಣಾ ಆಯೋಗದ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ’ ಎಂಬ ಮಾಹಿತಿ ಲಭಿಸಿದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿರುವ ಅವರು, ಅಗತ್ಯಬಿದ್ದರೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವುದಾಗಿಯೂ ಹೇಳಿದ್ದಾರೆ.
ಸ್ವಾಮಿ ಅವರು ಪ್ರಸ್ತುತ ದಿಲ್ಲಿಯ ಪೂರ್ವ ನಿಝಾಮುದ್ದೀನ್ ನಲ್ಲಿ ವಾಸಿಸುತ್ತಿದ್ದಾರೆ. ಅವರು ಪೂರ್ವ ದಿಲ್ಲಿ ಲೋಕಸಭಾ ಕ್ಷೇತ್ರದ ಮತದಾರರಾಗಿದ್ದು, 2024ರ ಲೋಕಸಭಾ ಚುನಾವಣೆ ಮತ್ತು 2025ರ ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಇದೇ ಕ್ಷೇತ್ರದಲ್ಲಿ ಮತ ಚಲಾಯಿಸಿದ್ದರು ಎಂದು ವರದಿಗಳು ತಿಳಿಸಿವೆ.