×
Ad

ಪುಣೆ: ಪತ್ನಿ, ಅಳಿಯನನ್ನು ಗುಂಡಿಕ್ಕಿ ಕೊಂದು ಸ್ವತಃ ಆತ್ಮಹತ್ಯೆ ಮಾಡಿಕೊಂಡ ಹಿರಿಯ ಪೊಲೀಸ್ ಅಧಿಕಾರಿ

Update: 2023-07-24 11:23 IST

ಪುಣೆ: ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಸೋಮವಾರ ಮಹಾರಾಷ್ಟ್ರದ ಪುಣೆ ನಗರದಲ್ಲಿನ ತನ್ನ ನಿವಾಸದಲ್ಲಿ ತನ್ನ ಪತ್ನಿ ಹಾಗೂ ಸೋದರಳಿಯನನ್ನು ಬಂದೂಕಿನಿಂದ ಗುಂಡಿಕ್ಕಿ ಕೊಂದಿದ್ದಲ್ಲದೆ ನಂತರ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾನೇರ್ ಪ್ರದೇಶದ ಎಸಿಪಿ ಭರತ್ ಗಾಯಕ್ವಾಡ್ ಅವರ ಬಂಗಲೆಯಲ್ಲಿ ಬೆಳಗಿನ ಜಾವ 3.30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಚತುರ್ಶೃಂಗಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

57ರ ವಯಸ್ಸಿನ ಗಾಯಕ್ವಾಡ್ ಅವರನ್ನು ಅಮರಾವತಿಯಲ್ಲಿ ಎಸಿಪಿಯಾಗಿ ನಿಯೋಜಿಸಲಾಗಿದ್ದು, ಅವರು ಮನೆಗೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಬೆಳಗಿನ ಜಾವ 3.30ರ ಸುಮಾರಿಗೆ ಎಸಿಪಿ ತನ್ನ ಪತ್ನಿಯ ತಲೆಗೆ ಗುಂಡು ಹಾರಿಸಿದ್ದಾರೆ. ಗುಂಡೇಟಿನ ಸದ್ದು ಕೇಳಿದ ಅವರ ಮಗ ಹಾಗೂ ಸೋದರಳಿಯ ಓಡಿಬಂದು ಬಾಗಿಲು ತೆರೆದರು. ಬಾಗಿಲು ತೆರೆದ ಕ್ಷಣದಲ್ಲಿ ಗಾಯಕ್ವಾಡ್ ಅವರು ತಮ್ಮ ಸೋದರಳಿಯನ ಮೇಲೆ ಗುಂಡು ಹಾರಿಸಿದ್ದಾರೆ. ನಂತರ ಗಾಯಕ್ವಾಡ್ ತನ್ನ ತಲೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಿಬ್ಬರು ಮೃತರನ್ನು ಪೊಲೀಸ್ ಅಧಿಕಾರಿಯ ಪತ್ನಿ ಮೋನಿ ಗಾಯಕ್ವಾಡ್ (44) ಮತ್ತು ಸೋದರಳಿಯ ದೀಪಕ್ (35) ಎಂದು ಗುರುತಿಸಲಾಗಿದೆ.

ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News