ಆಪರೇಷನ್ ಸಿಂಧೂರ ಕುರಿತ ಪೋಸ್ಟ್‌ಗೆ ಆಕ್ಷೇಪಾರ್ಹ ಪ್ರತಿಕ್ರಿಯೆ : ಗುರುಗ್ರಾಮ್‌ನಲ್ಲಿ ಕಾನೂನು ವಿದ್ಯಾರ್ಥಿನಿಯ ಬಂಧನ
Photo | indiatoday
ಹೊಸದಿಲ್ಲಿ : ಆಪರೇಷನ್ ಸಿಂಧೂರ ಕುರಿತ ಪೋಸ್ಟ್‌ಗೆ ಪ್ರತಿಕ್ರಿಯಿಸುವಾಗ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪದಲ್ಲಿ ಪುಣೆಯ ಕಾನೂನು ವಿದ್ಯಾರ್ಥಿನಿಯನ್ನು ಕೋಲ್ಕತ್ತಾ ಪೊಲೀಸರು ಗುರುಗ್ರಾಮ್‌ನಲ್ಲಿ ಬಂಧಿಸಿದ್ದಾರೆ.
ಶರ್ಮಿಷ್ಠ ಪನೋಲಿ ಬಂಧಿತ ಕಾನೂನು ವಿದ್ಯಾರ್ಥಿನಿ.
ʼಶರ್ಮಿಷ್ಠ ಪನೋಲಿ ಆಕ್ಷೇಪಾರ್ಹ ಹೇಳಿಕೆಗಳಿರುವ ವೀಡಿಯೊವನ್ನು ಇನ್ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ್ದರು. ಅದರಲ್ಲಿ ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಲಾಗಿತ್ತುʼ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತ ವೀಡಿಯೊ ವೈರಲ್ ಆಗುತ್ತಿದ್ದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಆ ಬಳಿಕ ಕೋಲ್ಕತ್ತಾದಲ್ಲಿ ಆಕೆಯ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಪ್ರಕರಣ ದಾಖಲಾದ ಬಳಿಕ ಪನೋಲಿ ಮತ್ತು ಆಕೆಯ ಕುಟುಂಬದ ಸದಸ್ಯರು ತಲೆ ಮರೆಸಿಕೊಂಡಿದ್ದರು. ಅವರಿಗೆ ಹಲವು ಬಾರಿ ನೋಟಿಸ್ ನೀಡುವ ಪ್ರಯತ್ನ ವಿಫಲವಾಗಿತ್ತು. ಇದರಿಂದಾಗಿ ನ್ಯಾಯಾಲಯ ಬಂಧನ ವಾರೆಂಟ್ ಜಾರಿಗೊಳಿಸಿದೆ. ಇದರ ಬೆನ್ನಲ್ಲೇ ಶರ್ಮಿಷ್ಠ ಪನೋಲಿ ಬಂಧನ ನಡೆದಿದೆ.
ವೀಡಿಯೊ ವೈರಲ್ ಆಗುತ್ತಿದ್ದಂತೆ ಶರ್ಮಿಷ್ಠ ಪನೋಲಿ ಈ ಮೊದಲು ಕ್ಷಮೆಯಾಚಿಸಿದ್ದರು. ಸಾಮಾಜಿಕ ಜಾಲತಾಣಗಳಿಂದ ಪೋಸ್ಟ್‌ನ್ನು ಡಿಲಿಟ್ ಮಾಡಿದ್ದರು.