ಸ್ವಾತಂತ್ರ್ಯ ದಿನಾಚರಣೆ | ಇಂದಿರಾ ಭವನದಲ್ಲಿ ಧ್ವಜಾರೋಹಣದ ವೇಳೆ ಮಳೆಯಲ್ಲಿ ನೆನೆಯುತ್ತಿದ್ದ ರಾಹುಲ್ ಗಾಂಧಿ; ಫೋಟೊ ವೈರಲ್
ರಾಹುಲ್ ಗಾಂಧಿ | PC : P X\ @INCIndia
ಹೊಸದಿಲ್ಲಿ : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದಿಲ್ಲಿಯ ಇಂದಿರಾ ಭವನದಲ್ಲಿ ನಡೆದ ಧ್ವಜಾರೋಹಣ ಸಮಾರಂಭದಲ್ಲಿ ಭಾರೀ ಮಳೆಯನ್ನೂ ಲೆಕ್ಕಿಸದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ರಾಹುಲ್ ಗಾಂಧಿ ನಿಂತಿರುವ ಫೋಟೊ ವೈರಲ್ ಆಗಿದೆ.
ಇಂದಿರಾ ಭವನದಲ್ಲಿ ನಡೆದ ಧ್ವಜಾರೋಹಣ ಸಮಾರಂಭದ ವೀಡಿಯೊಗಳು ಮತ್ತು ಫೋಟೊಗಳನ್ನು ಕಾಂಗ್ರೆಸ್ ಹಂಚಿಕೊಂಡಿದೆ. ವೀಡಿಯೊದಲ್ಲಿ ರಾಹುಲ್ ಗಾಂಧಿ ಮಳೆಯಲ್ಲಿ ನೆನೆಯುತ್ತಿರುವುದು ಕಂಡು ಬಂದಿದೆ. ನಾವು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಬದ್ಧರಾಗಿದ್ದೇವೆ ಮತ್ತು ಅದನ್ನು ರಕ್ಷಿಸುವುದನ್ನು ಮುಂದುವರಿಸುತ್ತೇವೆ ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ.
"ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದಿರಾ ಭವನದಲ್ಲಿ ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಇಂದು ನಾವು ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುತ್ತೇವೆ. ಅದನ್ನು ರಕ್ಷಿಸುವುದು ನಮ್ಮ ಸಾಮೂಹಿಕ ಕರ್ತವ್ಯ” ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದೆ.