×
Ad

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ | ಭಾರತೀಯರ ಸುರಕ್ಷತೆಗೆ ತಕ್ಷಣ ಕ್ರಮಕ್ಕೆ ರಾಹುಲ್ ಗಾಂಧಿ ಆಗ್ರಹ

ಇರಾನ್ ನೊಂದಿಗೆ ಹೆಚ್ಚುತ್ತಿರುವ ಅಮೆರಿಕ–ಇಸ್ರೇಲ್ ನ ಹಗೆತನ ಕಳವಳಕಾರಿ ಎಂದ ಕಾಂಗ್ರೆಸ್‌ ನಾಯಕ

Update: 2026-02-28 17:02 IST

ರಾಹುಲ್ ಗಾಂಧಿ | Photo Credit : PTI 

ಹೊಸದಿಲ್ಲಿ: ಇರಾನ್ ನೊಂದಿಗೆ ಹೆಚ್ಚುತ್ತಿರುವ ಅಮೆರಿಕ–ಇಸ್ರೇಲ್ ನ ಹಗೆತನ ಕಳವಳಕಾರಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಶನಿವಾರ ಸಾಮಾಜಿಕ ಜಾಲತಾಣ ಎಕ್ಸ್ ನಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ಮಧ್ಯಪ್ರಾಚ್ಯದಾದ್ಯಂತ ಇರುವ ಪ್ರತಿಯೊಬ್ಬ ಭಾರತೀಯ ನಾಗರಿಕನ ಸುರಕ್ಷತೆ ಮತ್ತು ಭದ್ರತೆ ನಮ್ಮ ಆದ್ಯತೆಯಾಗಿರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಉದ್ವಿಗ್ನ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಈ ಸಂದರ್ಭದಲ್ಲಿ, ವಿದೇಶದಲ್ಲಿರುವ ಭಾರತೀಯರನ್ನು ರಕ್ಷಿಸಲು ಭಾರತ ಸರ್ಕಾರವು ತಕ್ಷಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News