ಮತ ಕಳ್ಳತನದ ವಿರುದ್ಧದ ಹೋರಾಟಕ್ಕೆ ಜನಬೆಂಬಲ: ದಾಖಲೆಯ ಸಂಖ್ಯೆಯಲ್ಲಿ ರ‍್ಯಾಲಿಯಲ್ಲಿ ಭಾಗವಹಿಸಿದವರಿಗೆ ರಾಹುಲ್ ಗಾಂಧಿ ಧನ್ಯವಾದ
Photo Credit : X
ಹೊಸದಿಲ್ಲಿ: ಮತ ಕಳ್ಳತನದ ವಿರುದ್ಧ ದಿಲ್ಲಿಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ರ‍್ಯಾಲಿಗೆ ದಾಖಲೆಯ ಸಂಖ್ಯೆಯಲ್ಲಿ ಆಗಮಿಸಿ ಬೆಂಬಲ ವ್ಯಕ್ತಪಡಿಸಿದ ಜನರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧನ್ಯವಾದ ಅರ್ಪಿಸಿದ್ದಾರೆ.
ಮತ ಕಳ್ಳತನದ ವಿರುದ್ಧ ಧ್ವನಿ ಎತ್ತಲು ದೊಡ್ಡ ಸಂಖ್ಯೆಯಲ್ಲಿ ಜನರು ರ‍್ಯಾಲಿಯಲ್ಲಿ ಪಾಲ್ಗೊಂಡಿರುವುದು ಪ್ರಜಾಪ್ರಭುತ್ವ ಮತ್ತು ಸತ್ಯದ ಗೆಲುವಿನ ವಿಶ್ವಾಸವನ್ನು ಮತ್ತಷ್ಟು ಬಲಪಡಿಸಿದೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ‘ಮತ ಕಳ್ಳತನದ ವಿರುದ್ಧ ಧ್ವನಿ ಎತ್ತಲು ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ರ‍್ಯಾಲಿಯಲ್ಲಿ ಭಾಗವಹಿಸಿದ್ದಕ್ಕಾಗಿ ಧನ್ಯವಾದಗಳು. ನಿಮ್ಮ ಈ ಬೆಂಬಲದಿಂದ ಪ್ರಜಾಪ್ರಭುತ್ವಕ್ಕೆ ಮತ್ತು ಸತ್ಯಕ್ಕೆ ಜಯ ಸಿಗಲಿದೆ ಎಂಬ ವಿಶ್ವಾಸ ಮೂಡಿದೆ. INDIA ಗೆಲ್ಲಲಿದೆ!’ ಎಂದು ಹೇಳಿದ್ದಾರೆ.