×
Ad

ಲೋಕಸಭೆ ಚುನಾವಣೆ ಬಳಿಕ ರಾಹುಲ್ ಗಾಂಧಿ ಬಂಧನ: ಅಸ್ಸಾಂ ಸಿಎಂ

Update: 2024-01-24 21:22 IST

 ಹಿಮಂತ ಬಿಸ್ವಾ ಶರ್ಮಾ | Photo: PTI 

ಗುವಾಹಟಿ : ಹಿಂಸಾಚಾರವನ್ನು ಪ್ರಚೋದಿಸಿದ ಆರೋಪದ ಮೇಲೆ ಅಸ್ಸಾಂನಲ್ಲಿ ಎಫ್ಐಆರ್ ದಾಖಲಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಚುನಾವಣೆಯ ನಂತರ ಬಂಧಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬುಧವಾರ ಹೇಳಿದ್ದಾರೆ.

ಜನವರಿ 23 ರಂದು ಪಕ್ಷದ ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ಗುವಾಹಟಿಯಲ್ಲಿ, ಹಿಂಸಾಚಾರದ ಉದ್ದೇಶಪೂರ್ವಕ ಕೃತ್ಯಗಳಿಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರ ವಿರುದ್ಧ ಅಸ್ಸಾಂ ಪೊಲೀಸರು ಸ್ವಯಂ ಪ್ರೇರಿತವಾಗಿ ಎಫ್ಐಆರ್ ದಾಖಲಿಸಿದ್ದಾರೆ.

''ನಾವು ಎಫ್ಐಆರ್ ದಾಖಲಿಸಿದ್ದೇವೆ. ವಿಶೇಷ ತನಿಖಾ ತಂಡ ಎಸ್ಐಟಿ ತನಿಖೆ ನಡೆಸಲಿದೆ ಮತ್ತು ಲೋಕಸಭೆ ಚುನಾವಣೆಯ ನಂತರ ರಾಹುಲ್ ಗಾಂಧಿ ಬಂಧಿಸಲಾಗುವುದು'' ಎಂದು ಸಿಬ್ಸಾಗರ್ ಜಿಲ್ಲೆಯ ನಜೀರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಶರ್ಮಾ ಹೇಳಿದ್ದಾರೆ.

ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ರಚಿಸುವ ಎಸ್ಐಟಿ ಮೂಲಕ ಸಮಗ್ರ ತನಿಖೆಗಾಗಿ ಪ್ರಕರಣವನ್ನು ಅಸ್ಸಾಂ ಸಿಐಡಿಗೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಜಿ ಪಿ ಸಿಂಗ್ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News