×
Ad

ಬಿಹಾರ | ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ ವಿರುದ್ಧ ಎರಡು ಎಫ್ಐಆರ್ ದಾಖಲು

Update: 2025-05-16 10:12 IST

Photo | PTI

ಹೊಸದಿಲ್ಲಿ : ದರ್ಭಾಂಗಾದಲ್ಲಿ ನಿಷೇಧಾಜ್ಞೆಗಳನ್ನು ಉಲ್ಲಂಘಿಸಿ ಅನಧಿಕೃತ ಸಾರ್ವಜನಿಕ ಸಭೆಯನ್ನು ಆಯೋಜಿಸಿದ ಆರೋಪದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಹಲವು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎರಡು ಎಫ್ಐಆರ್ ದಾಖಲಾಗಿವೆ.

ಎಫ್ಐಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಇವೆಲ್ಲವೂ ನನಗೆ ಪದಕಗಳು. ನನ್ನ ವಿರುದ್ಧ 30 ರಿಂದ 32 ಪ್ರಕರಣಗಳಿವೆ ಎಂದು ಹೇಳಿದರು.

ದರ್ಭಂಗಾದ ಎಸ್‌ಡಿಪಿಒ ಅಮಿತ್ ಕುಮಾರ್ ಪ್ರತಿಕ್ರಿಯಿಸಿ, ʼಪಕ್ಷದ ಕಾರ್ಯಕರ್ತರ ಔಪಚಾರಿಕ ವಿನಂತಿಯ ಮೇರೆಗೆ ರಾಜೇಂದ್ರ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ಜಿಲ್ಲಾಡಳಿತವು ಕಾಂಗ್ರೆಸ್‌ಗೆ ಲಿಖಿತ ಅನುಮತಿ ನೀಡಿದೆ. ಆದರೆ, ಅಂಬೇಡ್ಕರ್ ಹಾಸ್ಟೆಲ್ ಆವರಣದಲ್ಲಿ ಪ್ರತ್ಯೇಕ ಕಾರ್ಯಕ್ರಮಕ್ಕೆ ಅನಧಿಕೃತ ಸಿದ್ಧತೆಗಳನ್ನು ನಡೆಸಲಾಗಿತ್ತು. ಇದರಿಂದಾಗಿ ದರ್ಭಾಂಗಾ ಸದರ್ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಿದ್ದರು. ಈ ಬಗ್ಗೆ ಕಾಂಗ್ರೆಸ್ ನಾಯಕರಿಗೂ ತಿಳಿಸಲಾಗಿತ್ತು. ಆದರೆ NSUI ರಾಷ್ಟ್ರೀಯ ಕಾರ್ಯದರ್ಶಿ ಮುಹಮ್ಮದ್ ಸದಾಬ್ ಅಖ್ತರ್, ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸೇರಿ ಅನುಮತಿಯಿಲ್ಲದೆ ಹಾಸ್ಟೆಲ್‌ನಲ್ಲಿ ಸಭೆಯನ್ನು ಆಯೋಜಿಸಿದರು. ರಾಹುಲ್ ಗಾಂಧಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರುʼ ಎಂದು ಹೇಳಿದರು.

ದರ್ಭಾಂಗಾ ಜಿಲ್ಲಾ ಕಲ್ಯಾಣ ಅಧಿಕಾರಿ ಅಲೋಕ್ ಕುಮಾರ್ ಮತ್ತು ಬ್ಲಾಕ್ ಕಲ್ಯಾಣ ಅಧಿಕಾರಿ ಖುರ್ಷಿದ್ ಆಲಂ ಅವರ ದೂರಿನ ಆಧಾರದ ಮೇಲೆ ರಾಹುಲ್‌ ಗಾಂಧಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ವಿರುದ್ಧ ಎರಡು ಎಫ್ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News