Gen Z ಪ್ರತಿಭಟನೆ ವೇಳೆ ಪೆಲೆಟ್ ಗನ್ ಬಳಕೆ ಆರೋಪ: FIR ದಾಖಲಿಸುವಂತೆ ಪೊಲೀಸ್‌ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

Update: 2026-08-21 13:53 IST

Photo: X/@INCIndia

ಹೊಸದಿಲ್ಲಿ: ಜುಲೈ 20ರಂದು ನಡೆದ Gen Z ಪ್ರತಿಭಟನೆಯ ಸಂದರ್ಭದಲ್ಲಿ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದ 19 ವರ್ಷದ ಸಾಹಿಲ್ ಲೋಚಬ್ ಅವರೊಂದಿಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ತೆರಳಿದರು.

ಪೆಲೆಟ್ ಗನ್‌ನಿಂದ ಗಾಯಗೊಂಡಿರುವ ಪ್ರಕರಣಕ್ಕೆ ಎಫ್‌ಐಆರ್ ದಾಖಲಿಸಲು ಪೊಲೀಸರು ನಿರಾಕರಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿ ಅವರು ಪೊಲೀಸ್ ಠಾಣೆಯ ಹೊರಗೆ ಧರಣಿ ನಡೆಸಿದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಜುಲೈ 20ರಂದು ನಡೆದ ‘ಸಂಸತ್‌ ಚಲೋ’ ಮೆರವಣಿಗೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAF) ಸಿಬ್ಬಂದಿ ಪೆಲೆಟ್ ಗನ್ ಬಳಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಆದರೆ, ಪೆಲೆಟ್ ಗನ್ ಬಳಸಿರುವ ಆರೋಪವನ್ನು ದಿಲ್ಲಿ ಪೊಲೀಸರು ಪದೇ ಪದೇ ನಿರಾಕರಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News