×
Ad

ಪಶ್ಚಿಮ ಬಂಗಾಳ: ಭಾರತ್ ಜೋಡೋ ನ್ಯಾಯ ಯಾತ್ರೆಯ ವೇಳೆ ರಾಹುಲ್ ಗಾಂಧಿ ಕಾರಿಗೆ ಕಲ್ಲು ತೂರಾಟ; ಆರೋಪ

Update: 2024-01-31 16:34 IST

Screengrab:X/@PTI

ಮಾಲ್ಡಾ: ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಕಾರಿಗೆ ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆನ್ನಲಾದ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ನಡೆದಿದೆ.

ರಾಹುಲ್ ಗಾಂಧಿಗೆ ಗಾಯಗಳಾಗಿಲ್ಲ, ಕಲ್ಲು ತೂರಾಟದಿಂದ ಕಾರಿನ ಕಿಟಕಿಯ ಗಾಜುಗಳಿಗೆ ಹಾನಿಯಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್‌ ಚೌಧರಿ ಆರೋಪಿಸಿದ್ದಾರೆ.

ರಾಹುಲ್ ಗಾಂಧಿಯವರ ಭಾರತ್ ಜೋಡೊ ನ್ಯಾಯ ಯಾತ್ರೆಯು ಬಿಹಾರದಿಂದ ಪಶ್ಚಿಮ ಬಂಗಾಳಕ್ಕೆ ಪ್ರವೇಶಿಸಿದ್ದು, ಇಂದು ಮಾಲ್ಡಾದ ಹರಿಶ್ಚಂದ್ರಪುರ ಪ್ರದೇಶದಲ್ಲಿ ಯಾತ್ರೆ ಸಾಗುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News